Homeದೇಶಡಿಎಂಕೆ ಮೈತ್ರಿಗೆ ಶಾಕ್, ಟಿವಿಕೆಗೆ ಬೆಂಬಲ ಸೂಚಿಸಿದ ಕಾಂಗ್ರೆಸ್

ಡಿಎಂಕೆ ಮೈತ್ರಿಗೆ ಶಾಕ್, ಟಿವಿಕೆಗೆ ಬೆಂಬಲ ಸೂಚಿಸಿದ ಕಾಂಗ್ರೆಸ್

ತಮಿಳುನಾಡು ರಾಜಕೀಯದಲ್ಲಿ ಅಚ್ಚರಿ ತಿರುವು ಕಂಡುಬಂದಿದ್ದು, ಡಿಎಂಕೆ ನೇತೃತ್ವದ ಮೈತ್ರಿಗೆ ಭಾರೀ ಶಾಕ್ ಉಂಟಾಗಿದೆ. ಕಾಂಗ್ರೆಸ್ ಪಕ್ಷವು ತನ್ನ ಹಳೆಯ ಮೈತ್ರಿಯನ್ನು ಬಿಟ್ಟು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕಡೆ ಮುಖ ಮಾಡಿದೆ.

ಚುನಾವಣಾ ಫಲಿತಾಂಶಗಳ ಬಳಿಕ ಸ್ಪಷ್ಟ ಬಹುಮತ ಯಾವುದೇ ಪಕ್ಷಕ್ಕೂ ಸಿಗದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿದ್ದವು. ಈ ನಡುವೆ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಮುಂದಾಗಿದ್ದು, ಮೈತ್ರಿ ಸರ್ಕಾರದ ಘೋಷಣೆಯೊಂದಿಗೆ ವಿವಿಧ ಪಕ್ಷಗಳ ಬೆಂಬಲ ಪಡೆಯಲು ಪ್ರಯತ್ನಿಸುತ್ತಿದೆ. ಇದಕ್ಕೆ ಸ್ಪಂದಿಸಿರುವ ಕಾಂಗ್ರೆಸ್, ತನ್ನ ಬೆಂಬಲ ನೀಡಲು ಮುಂದಾಗಿರುವುದು ರಾಜಕೀಯ ಸಮೀಕರಣಗಳನ್ನು ಸಂಪೂರ್ಣವಾಗಿ ಬದಲಿಸಿದೆ.

ಕಾಂಗ್ರೆಸ್ ಮತ್ತು ಟಿವಿಕೆ ನಡುವೆ ನಡೆದ ಮಾತುಕತೆಗಳಲ್ಲಿ ಸಂಪುಟ ಸ್ಥಾನ ಹಂಚಿಕೆ ಸೇರಿದಂತೆ ಹಲವು ವಿಚಾರಗಳು ಚರ್ಚೆಯಾಗಿದ್ದು, ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರದಲ್ಲಿ ಪ್ರಮುಖ ಸ್ಥಾನಮಾನ ದೊರೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

11 ಸ್ಥಾನಗಳ ಕೊರತೆಯಿರುವ ವಿಜಯ್ ನೇತೃತ್ವದ ಟಿವಿಕೆ ಇದೀಗ ಸರ್ಕಾರ ರಚನೆಗೆ ಬೆಂಬಲ ಕೋರಿ ಬುಧವಾರ ವಿಡುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಸಿಪಿಎಂ ಮತ್ತು ಸಿಪಿಐಗೆ ಔಪಚಾರಿಕವಾಗಿ ಪತ್ರ ಬರೆದಿದೆ. ನಟ ವಿಜಯ್ ಅವರೇ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಗೆದ್ದಿರುವುದರಿಂದ ತಮಿಳಿಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ 108 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೂ, 107 ಶಾಸಕರು ಮಾತ್ರ ಇದ್ದಾರೆ. ಪಕ್ಷಕ್ಕೆ ಬೆಂಬಲ ನೀಡುವಂತೆ ಕೋರಿ ಟಿವಿಕೆಯಿಂದ ಪತ್ರ ಬಂದಿರುವುದನ್ನು ಅಧಿಕೃತ ವಿಸಿಕೆ ಮೂಲಗಳು ದೃಢಪಡಿಸಿವೆ.

ಡ್ರಾವಿಡ ರಾಜಕೀಯದಲ್ಲಿ ಬೇರೂರಿರುವ ಎಐಎಡಿಎಂಕೆ ಮತ್ತು ಟಿವಿಕೆ ಪಕ್ಷಗಳು ಕೂಡಾ ಸ್ಪಷ್ಟ ಬಹುಮತ ಪಡೆಯಲು ಸಾಧ್ಯವಾಗಿಲ್ಲ. ಇದರ ಪರಿಣಾಮವಾಗಿ ಸರ್ಕಾರ ರಚನೆ, ಮೈತ್ರಿ ರಾಜಕಾರಣ ಮತ್ತು ಒಳ ಕಲಹಗಳ ಬಗ್ಗೆ ಹಲವು ಚರ್ಚೆಗಳು ನಡೆಯುತ್ತಿವೆ. ಆದರೆ ಎಐಎಡಿಎಂಕೆಯಲ್ಲೇ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ.

ಕಾಂಗ್ರೆಸ್ ಮತ್ತು ಎಐಎಡಿಎಂಕೆಯ ಒಂದು ವಿಭಾಗವು ವಿಜಯ್ ನೇತೃತ್ವದ ಟಿವಿಕೆಗೆ ಸರ್ಕಾರ ರಚಿಸುವಲ್ಲಿ ಬಾಹ್ಯ ಬೆಂಬಲ ನೀಡಲು ಇಚ್ಛೆ ವ್ಯಕ್ತಪಡಿಸುತ್ತಿರುವುದರಿಂದ ಡಿಎಂಕೆ ಮತ್ತು ಎಐಎಡಿಎಂಕೆ ಎರಡೂ ಪಕ್ಷಗಳು ಅಸಮಾಧಾನಗೊಂಡಿವೆ.

‘ಕಾಂಗ್ರೆಸ್ ‘ಬೆನ್ನಿಗೆ ಇರಿಯುವವರಂತೆ’ ವರ್ತಿಸುತ್ತಿದೆ. ಅಲ್ಲದೆ, ಕಾಂಗ್ರೆಸ್ ಪಕ್ಷದ ಎಲ್ಲಾ ಪ್ರಮುಖ ನಿರ್ಧಾರಗಳನ್ನು ಕೇಂದ್ರ ನಾಯಕತ್ವವೇ ತೆಗೆದುಕೊಳ್ಳುವಾಗ ಈ ನಿರ್ಧಾರವನ್ನು ಮಾತ್ರ ಸ್ಥಳೀಯ ಘಟಕಕ್ಕೆ ಬಿಟ್ಟಿದ್ದು ಹೇಗೆ’ ಎಂದು ಡಿಎಂಕೆ ವಕ್ತಾರ ಶರವಣನ್ ಅಣ್ಣಾದೊರೈ ಅವರು ಪ್ರಶ್ನಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments