Homeಕರ್ನಾಟಕಸಚಿವ ಡಿ ಸುಧಾಕರ್ ನಿಧನ, ಸಿಎಂ ಸೇರಿ ಗಣ್ಯರಿಂದ ಸಂತಾಪ

ಸಚಿವ ಡಿ ಸುಧಾಕರ್ ನಿಧನ, ಸಿಎಂ ಸೇರಿ ಗಣ್ಯರಿಂದ ಸಂತಾಪ

ರಾಜ್ಯದ ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್  ಅವರು ಇಂದು ಭಾನುವಾರ ನಸುಕಿನ ಜಾವ ನಿಧನರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 66 ವರ್ಷ ವಯಸ್ಸಾಗಿತ್ತು.

ಮಣಿಪಾಲ ಆಸ್ಪತ್ರೆಯಿಂದ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದ ಸಚಿವ ಡಿ ಸುಧಾಕರ್ ಅವರು ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಆಗಿದ್ದರು.

ಮೊಣಕಾಲು ಶಸ್ತ್ರಚಿಕಿತ್ಸೆ ಸಂಬಂಧ ಸಚಿವ ಸುಧಾಕರ್​​ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡು ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಐಸಿಯುನಲ್ಲಿಯೇ ಇದ್ದ ಸುಧಾರಕರ್ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಸಿಎಂ ಸಂತಾಪ

ನಮ್ಮ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಸಚಿವರು, ಹಿರಿಯ ನಾಯಕರು ಆಗಿದ್ದ ಡಿ.ಸುಧಾಕರ್ ಅವರ ಅಕಾಲಿಕ ನಿಧನದಿಂದ ದುಃಖಿತನಾಗಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.

ಎಕ್ಸ್ ತಾಣದಲ್ಲಿ ಬರೆದುಕೊಂಡಿರುವ ಅವರು,  ಕಳೆದ ಕೆಲವು ದಿನಗಳಿಂದ ಅನಾರೋಗ್ಯ ನಿಮಿತ್ತ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ನಾನು ಖುದ್ದು ಆಸ್ಪತ್ರೆಗೆ ಭೇಟಿನೀಡಿ ಸುಧಾಕರ್‌ ಅವರಿಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರಿಂದ ಅವರ ಆರೋಗ್ಯದ ಮಾಹಿತಿ ಪಡೆದಿದ್ದೆ, ಈ ವೇಳೆ ಅವರು ಗುಣಮುಖರಾಗುವ ಭರವಸೆ ನನ್ನಲ್ಲಿ ಮೂಡಿತ್ತು ಎಂದಿದ್ದಾರೆ.

ಜನಸೇವೆಯಲ್ಲಿ‌ ಅಪಾರ ಕಾಳಜಿ ಮತ್ತು ಬದ್ಧತೆಯಿದ್ದ ವ್ಯಕ್ತಿ ಸುಧಾಕರ್. ಇಂಥವರು ಇನ್ನಷ್ಟು ಕಾಲ ಜನರ ನಡುವೆ ಇರಬೇಕಿತ್ತು. ವೈದ್ಯರ ನಿರಂತರ ಪ್ರಯತ್ನ, ನಮ್ಮೆಲ್ಲರ ಹಾರೈಕೆಯ ಹೊರತಾಗಿಯೂ ಇಂದು ಸುಧಾಕರ್ ಅವರು ನಮ್ಮನ್ನಗಲಿದ್ದಾರೆ. ಇದು ಅತ್ಯಂತ ನೋವಿನ ಗಳಿಗೆ ಎಂದು ಹೇಳಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಸಿಎಂ ಪ್ರಾರ್ಥಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments