Homeದೇಶಬೆಲೆ ಏರಿಕೆ | ಪೆಟ್ರೋಲ್-ಡೀಸೆಲ್ ದರ ಲೀಟರ್‌ಗೆ ರೂ.3 ಹೆಚ್ಚಳ

ಬೆಲೆ ಏರಿಕೆ | ಪೆಟ್ರೋಲ್-ಡೀಸೆಲ್ ದರ ಲೀಟರ್‌ಗೆ ರೂ.3 ಹೆಚ್ಚಳ

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಲೀಟರ್‌ಗೆ ರೂ.3ರಷ್ಟು ಹೆಚ್ಚಳ ಮಾಡಲಾಗಿದೆ. ನಾಲ್ಕು ವರ್ಷಗಳ ಬಳಿಕ ಸರ್ಕಾರಿ ತೈಲ ಕಂಪನಿಗಳು ಇಂಧನ ದರ ಪರಿಷ್ಕರಣೆಗೆ ಮುಂದಾಗಿರುವುದು ಜನತೆಗೆ ಮತ್ತೊಂದು ಬೆಲೆ ಶಾಕ್ ನೀಡಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ದರವು ರೂ.94.77ರಿಂದ ರೂ.97.77ಕ್ಕೆ ಏರಿಕೆಯಾದರೆ, ಡೀಸೆಲ್ ದರವು ರೂ.89.67ರಿಂದ ರೂ.90.67ಕ್ಕೆ ಹೆಚ್ಚಳವಾಗಿದೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ (IOC), ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಸಂಸ್ಥೆಗಳು ಹೊಸ ದರ ಜಾರಿಗೆ ತಂದಿವೆ.

ಮಧ್ಯಪ್ರಾಚ್ಯದಲ್ಲಿ ಉಂಟಾಗಿರುವ ಸಂಘರ್ಷ ಜಾಗತಿಕ ಕಚ್ಚಾ ತೈಲ ಮಾರುಕಟ್ಟೆಯಲ್ಲಿ ಭಾರೀ ಅಸ್ಥಿರತೆ ಉಂಟು ಮಾಡಿದೆ.

ತೈಲ ಉತ್ಪಾದನೆ ಮತ್ತು ಸಾಗಣೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿಯಿಂದ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಭಾರತ ಆಮದು ಮಾಡುವ ಕಚ್ಚಾ ತೈಲದ ಸರಾಸರಿ ಬೆಲೆ ಫೆಬ್ರವರಿಯಲ್ಲಿ ಬ್ಯಾರೆಲ್‌ಗೆ ಸುಮಾರು 69 ಡಾಲರ್ ಇದ್ದರೆ, ಯುದ್ಧ ಆರಂಭವಾದ ಬಳಿಕ ಅದು 113–114 ಡಾಲರ್ ಮಟ್ಟಕ್ಕೇರಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments