Homeಕರ್ನಾಟಕವೇಣುಗೋಪಾಲ್, ಸುರ್ಜೇವಾಲಾ ಹಾಗೂ ಡಿಕೆಶಿ ಜೊತೆ ಸಿಎಂ ಸಭೆ; ನಾಯಕತ್ವ ಬದಲಾವಣೆಗೆ ತೆರೆ ಬೀಳುತ್ತಾ?

ವೇಣುಗೋಪಾಲ್, ಸುರ್ಜೇವಾಲಾ ಹಾಗೂ ಡಿಕೆಶಿ ಜೊತೆ ಸಿಎಂ ಸಭೆ; ನಾಯಕತ್ವ ಬದಲಾವಣೆಗೆ ತೆರೆ ಬೀಳುತ್ತಾ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯ ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.

ಈ ಮೊದಲು ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಚಿವರು, ಶಾಸಕರೊಂದಿಗೆ ಉಪಹಾರ ಸೇವಿಸಿದ್ದಾರೆ. ನಾಯಕತ್ವ ಬದಲಾವಣೆ, ಸಂಪುಟ ಪುನಾರಚನೆಯ ಕುರಿತು ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಕಾವೇರಿದ ಚರ್ಚೆ ನಡೆಯುತ್ತಿದೆ.

ಸಚಿವರಾದ ಎಂ.ಬಿ. ಪಾಟೀಲ್, ಜಿ. ಪರಮೇಶ್ವರ, ಬೈರತಿ ಸುರೇಶ್, ಸತೀಶ್ ಜಾರಕಿಹೊಳಿ, ಕೆ.ಜೆ. ಜಾರ್ಜ್, ಎಚ್.ಸಿ. ಮಹದೇವಪ್ಪ, ಎಂಎಲ್‌ಸಿ ಬಿ.ಕೆ. ಹರಿಪ್ರಸಾದ್ ಹಾಗೂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ಸಭೆಯಲ್ಲಿ ಭಾಗವಹಿಸಿದ್ದರು. ಇದೇ ವೇಳೆ 17ಕ್ಕೂ ಹೆಚ್ಚು ಶಾಸಕರು ಈಗಾಗಲೇ ಕರ್ನಾಟಕ ಭವನಕ್ಕೆ ಆಗಮಿಸಿದ್ದು, ಇನ್ನೂ ಹಲವು ಶಾಸಕರು ದೆಹಲಿಗೆ ತೆರಳುವ ಸಾಧ್ಯತೆಯಿದೆ.

ತದನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಪ್ರತ್ಯೇಕ ಚರ್ಚೆ ನಡೆಸಿದರು. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೇವಾಲಾ ಹಾಗೂ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಸೇರಿದಂತೆ ಹಲವು ಹಿರಿಯ ನಾಯಕರು ಇಂದಿರಾ ಭವನಕ್ಕೆ ಆಗಮಿಸಿದ್ದು, ಸಭೆಗೆ ಭಾರೀ ಮಹತ್ವ ಸಿಕ್ಕಿದೆ. ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಇಂದಿನ ಸಭೆ ಮೂಲಕ ತೆರೆ ಬೀಳುತ್ತಾ ಕಾದುನೋಡಬೇಕು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments