Homeಕರ್ನಾಟಕ2026ನೇ ಸಾಲಿನ ವಿ.ಪಿ.ಸಿಂಗ್ & ಕರ್ಪೂರಿ ಠಾಕೂರ್ ಪ್ರಶಸ್ತಿ ಪ್ರಕಟ

2026ನೇ ಸಾಲಿನ ವಿ.ಪಿ.ಸಿಂಗ್ & ಕರ್ಪೂರಿ ಠಾಕೂರ್ ಪ್ರಶಸ್ತಿ ಪ್ರಕಟ

– ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಪ್ರಶಸ್ತಿ ಘೋಷಣೆ
– ದೇವಮ್ಮ ಪ್ರಶಸ್ತಿಗೆ ಪತ್ರಕರ್ತೆ ಮಿನಿ ತೇಜಸ್ವಿ ಅವರು ಆಯ್ಕೆ

2026ನೇ ಸಾಲಿನ ವಿ.ಪಿ.ಸಿಂಗ್ ಮತ್ತು ಕರ್ಪೂರಿ ಠಾಕೂರ್ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದರ ಮತ್ತು ವರದಿಗಾರರ ಸಂಘ ಘೋಷಿಸಿದೆ.

ಈ ಬಾರಿ ವಿ.ಪಿ.ಸಿಂಗ್ ಮತ್ತು ಕರ್ಪೂರಿ ಠಾಕೂರ್ ಪುರಸ್ಕಾರಕ್ಕೆ ತಲಾ ಏಳು ಸಾಧಕರು ಭಾಜನರಾಗಿದ್ದಾರೆ. ಸಾಮಾಜಿಕ, ಆರೋಗ್ಯ, ಶಿಕ್ಷಣ ಮತ್ತು ಸಮುದಾಯ ಸೇವೆಯಂತಹ ಕ್ಷೇತ್ರಗಳಲ್ಲಿ ಅಮೂಲ್ಯ ಕೊಡುಗೆ ನೀಡಿದವರಿಗೆ ವಿ.ಪಿ.ಸಿಂಗ್ ಪ್ರಶಸ್ತಿ ನೀಡಲಾಗುತ್ತಿದೆ.

ವಿ.ಪಿ.ಸಿಂಗ್ ಪ್ರಶಸ್ತಿಗೆ ಭಾಜನಾರದವರು

ವಿ.ಪಿ.ಸಿಂಗ್ ಪ್ರಶಸ್ತಿಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.ದಿನೇಶ್, ಸ್ಪರ್ಶ ಆಸ್ಪತ್ರೆಯ ತಜ್ಞವೈದ್ಯ ಡಾ.ನಾಗೇಶ್ ಬಸವರಾಜ, ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆಯ ನಿರ್ದೇಶಕ ಡಾ.ಶಶಿಭೂಷಣ್, ಸಿಗಂದೂರು ಕ್ಷೇತ್ರದ ಧರ್ಮದರ್ಶಿ ರಾಮಪ್ಪ, ಹಿರಿಯ ಪತ್ರಕರ್ತರಾದ ರಾಜು ಕಂಬಾರ, ಕೆ.ಎಸ್.ಸೋಮಣ್ಣ, ಸಮಾಜಸೇವಕ ಲಕ್ಷ್ಮೀನಾರಾಯಣ ಅವರುಗಳು ಆಯ್ಕೆಯಾಗಿರುತ್ತಾರೆ.

ಕರ್ಪೂರಿ ಠಾಕೂರ್ ಪ್ರಶಸ್ತಿಗೆ ಆಯ್ಕೆಯಾದವರು

ಕರ್ಪೂರಿ ಠಾಕೂರ್ ಪ್ರಶಸ್ತಿಗೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕಾಂತರಾಜ, ಕರ್ನಾಟಕ ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ.ಸಿದ್ದರಾಜು, ಬೆಂಗಳೂರು ಉತ್ತರ ವಿವಿ ಉಪಕುಲಪತಿ ಪ್ರೊ. ಬಿ.ಕೆ. ರವಿ ಹಿರಿಯ ಪತ್ರಕರ್ತರುಗಳಾದ ಲಕ್ಷ್ಮಣ ಕೊಡಸೆ, ಗಂಗಾಧರ ಮೊದಲಿಯಾರ್, ಐ.ಎಚ್.ಸಂಗಮದೇವ ಹಾಗೂ ರವಿ ಬಿದನೂರ ಅವರುಗಳು ಆಯ್ಕೆಯಾಗಿರುತ್ತಾರೆ.

ದೇವಮ್ಮ ಪ್ರಶಸ್ತಿಗೆ ಪತ್ರಕರ್ತೆ ಮಿನಿ ತೇಜಸ್ವಿ ಅವರು ಆಯ್ಕೆಯಾಗಿರುತ್ತಾರೆಂದು ಸಂಘವು ಪ್ರಕಟಣೆಯಲ್ಲಿ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments