ಜೂನ್ 3 ರಂದು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಕಾಂಗ್ರೆಸ್ ನಾಯಕ ಡಿ ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಲೋಕ ಭವನದಲ್ಲಿ ವ್ಯಾಪಕ ವ್ಯವಸ್ಥೆ ಮಾಡಲಾಗಿದೆ.
ವಿಧಾನಸೌಧ ಮತ್ತು ಲೋಕಭವನ ಪ್ರದೇಶದ ಸುತ್ತಲೂ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ, ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರನ್ನು ಒಳಗೊಂಡ ಕಾಂಗ್ರೆಸ್ ಧ್ವಜಗಳು ಮತ್ತು ದೊಡ್ಡ ಬ್ಯಾನರ್‌ಗಳನ್ನು ಹಾಕಲಾಗಿದೆ.
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್, ಬುಧವಾರ ಸಂಜೆ 4.05 ಗಂಟೆಗೆ ಲೋಕ ಭವನದಲ್ಲಿ ಸಚಿವ ಸಂಪುಟದ ಕೆಲವು ಸದಸ್ಯರೊಂದಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ನೂತನ ಸಿಎಂ ಡಿ ಕೆ ಶಿವಕುಮಾರ್ ಅವರ ಸಚಿವ ಸಂಪುಟ ಸೇರುವವರು ಯಾರು?
ಡಾ. ಜಿ. ಪರಮೇಶ್ವರ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಕೆಜೆ ಜಾರ್ಜ್, ರಾಮಲಿಂಗಾರೆಡ್ಡಿ, ಕೃಷ್ಣಬೈರೇಗೌಡ, ಯು ಟಿ ಖಾದರ್, ಎಂ ಬಿ ಪಾಟೀಲ್, ಪ್ರಿಯಾಂಕ್ ಖರ್ಗೆ, ಈಶ್ವರ್ ಖಂಡ್ರೆ ಅವರು ಡಿಕೆಶಿ ಸಂಪುಟ ಸೇರುತ್ತಾರೆ ಎನ್ನಲಾಗಿದೆ.
ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮುಖಂಡ ಕೆ ಸಿ ವೇಣುಗೋಪಾಲ್, ಎಐಸಿಸಿ ಮುಖಂಡ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಬೇರೆ ರಾಜ್ಯಗಳ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳು, ಸಂಸದರು
ಸರ್ವಧರ್ಮ ಗುರುಗಳು ಭಾಗಿಯಾಗಲಿದ್ದಾರೆ.


