Homeಕರ್ನಾಟಕನಿಯಮಗಳಿಂದ ವಿನಾಯಿತಿ ಪಡೆದುಕೊಳ್ಳುವ ನೈತಿಕ ಹಕ್ಕು ಆರ್‌ಎಸ್‌ಎಸ್‌ಗೆ ಇಲ್ಲ: ಪ್ರಿಯಾಂಕ್ ಖರ್ಗೆ

ನಿಯಮಗಳಿಂದ ವಿನಾಯಿತಿ ಪಡೆದುಕೊಳ್ಳುವ ನೈತಿಕ ಹಕ್ಕು ಆರ್‌ಎಸ್‌ಎಸ್‌ಗೆ ಇಲ್ಲ: ಪ್ರಿಯಾಂಕ್ ಖರ್ಗೆ

ರಾಷ್ಟ್ರೀಯತೆ, ಶಿಸ್ತು ಮತ್ತು ಕರ್ತವ್ಯದ ಕುರಿತು ನಿರಂತರವಾಗಿ ಮಾತನಾಡುವ ಸಂಘಟನೆಯೊಂದು, ಪಾರದರ್ಶಕತೆ, ಕಾನೂನಿನ ಅನುಸರಣೆ ಮತ್ತು ಭಾರತದ ಸಂವಿಧಾನದ ಬಗೆಗಿನ ಗೌರವವನ್ನೂ ಅಷ್ಟೇ ದೃಢವಾಗಿ ಪ್ರದರ್ಶಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಗ್ರಹಿಸಿದ್ದಾರೆ.

ಸಾಮಾನ್ಯ ಭಾರತೀಯರು ನಿಯಮಗಳನ್ನು ಪಾಲಿಸಬೇಕೆಂದು ಒತ್ತಾಯಿಸುತ್ತಲೇ, ತಾನು ಮಾತ್ರ ಅದೇ ನಿಯಮಗಳಿಂದ ವಿನಾಯಿತಿ ಪಡೆದುಕೊಳ್ಳುವ ನೈತಿಕ ಹಕ್ಕು ಆರ್‌ಎಸ್‌ಎಸ್‌ಗೆ ಇಲ್ಲ. ಕಾರ್ಮಿಕರು, ಸಣ್ಣ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಎನ್‌ಜಿಒಗಳು, ಟ್ರಸ್ಟ್‌ಗಳು, ಕಂಪನಿಗಳು ಮತ್ತು ನಾಗರಿಕರು ನೋಂದಣಿ, ಬಹಿರಂಗಪಡಿಸುವಿಕೆ, ಲೆಕ್ಕಪರಿಶೋಧನೆ ಮತ್ತು ತೆರಿಗೆ ಪಾವತಿಗೆ ಬದ್ಧರಾಗಿದ್ದಾರೆ. ಆದ್ದರಿಂದ ಆರ್‌ಎಸ್‌ಎಸ್ ಕೂಡ ದೇಶದ ಕಾನೂನಿಗೆ ಮಾದರಿಯಾಗಿ ಬದ್ಧವಾಗಿರಬೇಕು ಎಂದು ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬರೆದ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಆರ್‌ಎಸ್‌ಎಸ್ ತನ್ನ ಶತಮಾನೋತ್ಸವದ ಈ ಸಂದರ್ಭವನ್ನು ಕೇವಲ ಆಚರಣೆಗಾಗಿ ಮಾತ್ರವಲ್ಲ, ಸಾಂವಿಧಾನಿಕ ಆತ್ಮಾವಲೋಕನಕ್ಕಾಗಿಯೂ ಬಳಸಿಕೊಳ್ಳಬೇಕೆಂದು ನಾವು ಆಗ್ರಹಿಸುತ್ತೇವೆ. ಭಾರತದ ಈ ನೂರನೇ ವರ್ಷದಲ್ಲಿ ದೇಶಕ್ಕೆ ಆರ್‌ಎಸ್‌ಎಸ್ ನೀಡಬಹುದಾದ ಅತ್ಯುತ್ತಮ ಗೌರವವೆಂದರೆ, ತನ್ನನ್ನು ತಾನು ನೋಂದಾಯಿಸಿಕೊಳ್ಳುವುದು, ತನ್ನ ಚಟುವಟಿಕೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಬಹಿರಂಗಪಡಿಸುವುದು, ಅನ್ವಯವಾಗುವ ಎಲ್ಲ ತೆರಿಗೆಗಳನ್ನು ಪಾವತಿಸುವುದು ಮತ್ತು ಭಾರತೀಯ ಕಾನೂನಿನ ಚೌಕಟ್ಟಿನೊಳಗೆ ಪಾರದರ್ಶಕ ಹಾಗೂ ಜವಾಬ್ದಾರಿಯುತ ಸಂಘಟನೆಯಾಗಿ ಕಾರ್ಯನಿರ್ವಹಿಸಬೇಕು ಎಂದಿದ್ದಾರೆ.

ನಿಮ್ಮ ಅಧಿಕೃತ ಪ್ರತಿನಿಧಿಗಳನ್ನು ಕಳುಹಿಸಿ ಮೇಲಿನ ವಿಷಯಗಳ ಕುರಿತು ಚರ್ಚೆ ನಡೆಸಲು ನಾವು ಔಪಚಾರಿಕ ಪ್ರತಿಕ್ರಿಯೆಯನ್ನು ನಿರೀಕ್ಷಿಸುತ್ತೇವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments