Homeಕರ್ನಾಟಕಪೌರಕಾರ್ಮಿಕರ ಸಮಸ್ಯೆ | ಆದ್ಯತೆ ಅನುಸಾರ ಪರಿಹಾರ: ಸಚಿವ ಯತೀಂದ್ರ ಸಿದ್ದರಾಮಯ್ಯ

ಪೌರಕಾರ್ಮಿಕರ ಸಮಸ್ಯೆ | ಆದ್ಯತೆ ಅನುಸಾರ ಪರಿಹಾರ: ಸಚಿವ ಯತೀಂದ್ರ ಸಿದ್ದರಾಮಯ್ಯ

ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ‘ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ ಹಾಗೂ ಪುರಸಭೆಗಳ ಪೌರಕಾರ್ಮಿಕರ ಮಹಾಸಂಘ’ದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ಪೌರಕಾರ್ಮಿಕರು ಎದುರಿಸುತ್ತಿರುವ ವಿವಿಧ ಸವಾಲುಗಳು, ಸಮಸ್ಯೆಗಳು ಹಾಗೂ ಕುಂದುಕೊರತೆಗಳ ಕುರಿತು ಸಮಗ್ರ ಚರ್ಚೆ ನಡೆಯಿತು. ಕೆಲಸದ ಪರಿಸ್ಥಿತಿ, ಮೂಲಭೂತ ಸೌಲಭ್ಯಗಳು, ಸೇವಾ ಭದ್ರತೆ, ಆರೋಗ್ಯ ಸೌಲಭ್ಯಗಳು ಮತ್ತು ಕಲ್ಯಾಣ ಯೋಜನೆಗಳಿಗೆ ಸಂಬಂಧಿಸಿದ ಹಲವು ವಿಚಾರಗಳನ್ನು ಮಹಾಸಂಘದ ಪದಾಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ಪದಾಧಿಕಾರಿಗಳ ಮನವಿಗಳನ್ನು ಆಲಿಸಿದ ಸಚಿವರು, ಪೌರಕಾರ್ಮಿಕರ ಸಮಸ್ಯೆಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಅವುಗಳಿಗೆ ಸೂಕ್ತ ಪರಿಹಾರ ಕಲ್ಪಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಹಾಸಂಘದ ವತಿಯಿಂದ ನೂತನ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಸನ್ಮಾನಿಸಿ ಗೌರವ ಸಲ್ಲಿಸಲಾಯಿತು.

ರಾಜ್ಯಾಧ್ಯಕ್ಷರಾದ ಮೈಸೂರ್ ನಾರಾಯಣ. ಸದಸ್ಯರಾದ ಓಬಳೇಶ್, ರಾಜ್ಯ ಕಾರ್ಯದರ್ಶಿ ಮದ್ದೂರು ಶ್ರೀನಿವಾಸ್.ಆರ್, ಶಿವಣ್ಣ ಬಾಬು ಆರ್ಟಿಸ್ಟ್, ಬಳ್ಳಾರಿ ನಾಗರಾಜು ಹಾಗೂ ಇನ್ನಿತರ ಪದಾಧಿಕಾರಿಗಳು, ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments