Homeಕರ್ನಾಟಕಪಶ್ಚಿಮ ಬಂಗಾಳ | ಪೈಪ್‌ಲೈನ್‌ನಲ್ಲಿ ಭಾರೀ ಸ್ಫೋಟ, 20ಕ್ಕೂ ಹೆಚ್ಚು ಮಂದಿಗೆ ಗಾಯ

ಪಶ್ಚಿಮ ಬಂಗಾಳ | ಪೈಪ್‌ಲೈನ್‌ನಲ್ಲಿ ಭಾರೀ ಸ್ಫೋಟ, 20ಕ್ಕೂ ಹೆಚ್ಚು ಮಂದಿಗೆ ಗಾಯ

ಪಶ್ಚಿಮ ಬಂಗಾಳದ ಪೂರ್ವ ಮಿಡ್ನಾಪುರ ಜಿಲ್ಲೆಯ ಹಲ್ದಿಯಾದಲ್ಲಿರುವ ಹಲ್ದಿಯಾ ಪೆಟ್ರೋಕೆಮಿಕಲ್ಸ್ (HPL)ನ ನಾಫ್ತಾ (Naphtha) ಸಾಗಿಸುವ ಪೈಪ್‌ಲೈನ್‌ನಲ್ಲಿ ಭಾರೀ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಮಂಗಳವಾರ ಬೆಳಗಿನ ಜಾವ ಸುಮಾರು 2.45ರಿಂದ 3 ಗಂಟೆಯ ನಡುವೆ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಹಲ್ದಿಯಾ ಪುರಸಭೆಯ ವಾರ್ಡ್‌ 13ರ ಚಿರಂಜಿಬ್‌ಪುರ ಪ್ರದೇಶಕ್ಕೆ ವ್ಯಾಪಿಸಿದೆ. ಬೆಂಕಿಯ ಜ್ವಾಲೆ ಹಲವು ಮನೆಗಳನ್ನು ಆವರಿಸಿದ್ದು, ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಯಿತು.

ಘಟನೆಯ ಮಾಹಿತಿ ಸಿಕ್ಕ ತಕ್ಷಣ 12ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿದವು. ಪೊಲೀಸರ ಪ್ರಕಾರ, ಗಾಯಗೊಂಡವರಲ್ಲಿ ಹಲ್ದಿಯಾ ಪೆಟ್ರೋಕೆಮಿಕಲ್ಸ್‌ನ ಇಬ್ಬರು ಭದ್ರತಾ ಸಿಬ್ಬಂದಿಯೂ ಸೇರಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.

ಕೆಲವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸುಮಾರು 10 ಮಂದಿಯನ್ನು ಕೋಲ್ಕತ್ತಾದ ಎಸ್‌ಎಸ್‌ಕೆಎಂ ಆಸ್ಪತ್ರೆ, ಎನ್‌ಆರ್‌ಎಸ್ ವೈದ್ಯಕೀಯ ಕಾಲೇಜು ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳವನ್ನು ಭದ್ರತಾ ವಲಯವಾಗಿ ಘೋಷಿಸಲಾಗಿದ್ದು, ಬೆಂಕಿ ಸಂಪೂರ್ಣ ನಿಯಂತ್ರಣಕ್ಕೆ ತರುವ ಕಾರ್ಯ ಮುಂದುವರಿದಿದೆ. ಅವಘಡಕ್ಕೆ ನಿಖರ ಕಾರಣ ತನಿಖೆ ಬಳಿಕವೇ ತಿಳಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments