Homeಕರ್ನಾಟಕ430 ಕಿ.ಮೀ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು, ಇದರಲ್ಲಿ ಯಾವುದೇ ರಾಜಿಯಿಲ್ಲ: ಸಚಿವ ಕೃಷ್ಣ ಬೈರೇಗೌಡ

430 ಕಿ.ಮೀ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು, ಇದರಲ್ಲಿ ಯಾವುದೇ ರಾಜಿಯಿಲ್ಲ: ಸಚಿವ ಕೃಷ್ಣ ಬೈರೇಗೌಡ

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ರವರು ಬೀದಿ ವ್ಯಾಪಾರಿಗಳ ಜಂಟಿ ಹೋರಾಟ ಸಮಿತಿ ಪದಾಧಿಕಾರಿಗಳ ಜೊತೆ ಸಭೆ ನಡೆಸಿ ಮಹತ್ವದ ಸೂಚನೆಗಳನ್ನು ನೀಡಿದರು.

ಸರ್ಕಾರ ಬಡವರ ಪರವಾಗಿ ಸದಾ ಇರುತ್ತದೆ, ನಾಗರಿಕರು ಓಡಾಡಲು ಸುಗಮ ಮಾರ್ಗ ನಿರ್ಮಿಸಲು ನಾವು ಈ ಕ್ರಮ ಕೈಗೊಳ್ಳುತ್ತಿದ್ದೇವೆ. ಬೆಂಗಳೂರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ಜೀವನ ನಡೆಯಬೇಕೆನ್ನುವುದೇ ನಮ್ಮ ಆಶಯ. ಸುಪ್ರಿಂ ಕೋರ್ಟ್ ಆದೇಶವನ್ನು ನಾವು ಪಾಲಿಸಿಕೊಂಡು ಪಾದಚಾರಿ ಮಾರ್ಗದಲ್ಲಿರುವೆಲ್ಲಾ ಒತ್ತುವರಿಗಳನ್ನು ತೆರವುಗೊಳಿಸುತ್ತಿದ್ದೇವೆ ಎಂದು ಮನವರಿಕೆ ಮಾಡಿದರು.

ಪಾದಚಾರಿ ಮಾರ್ಗಗಳಲ್ಲಿ ಜನ ಓಡಾಡಲು ಸುಗಮ ಮಾರ್ಗವಿರಬೇಕು. ಅದರಲ್ಲಿ ಯಾವುದೇ ರಾಜಿಯಿಲ್ಲ. ಪಾದಚಾರಿ ಮಾರ್ಗ ಒತ್ತುವರಿ ತೆರವಿಗೆ ಬೀದಿ ಬದಿ ವ್ಯಾಪಾರಿಗಳ ಸಹಕಾರ ಪ್ರಮುಖವಾಗಿ ಬೇಕಿದೆ. ನಗರದ ಪ್ರಮುಖ ರಸ್ತೆಗಳಾದ 1,500 ಕಿ.ಮೀ ರಸ್ತೆಗಳಲ್ಲಿ ವ್ಯಾಪಾರ ಮಾಡಬೇಕಿ. ಉಳಿದ ಶೇ. 80-90 ರಷ್ಟು ವಾರ್ಡ್ ರಸ್ತೆಗಳಲ್ಲಿ ವ್ಯಾಪಾರ ಮಾಡಿಕೊಳ್ಳಲು ಅವಕಾಶವಿದೆ. ಅದಕ್ಕೆ ಪಾಲಿಕೆ ಸಂಪೂರ್ಣ ಸಹಕಾರ ನೀಡಲಿದೆ ಎಂದರು.

ನಗರದಲ್ಲಿ ನಿನ್ನೆಯವರೆಗೆ 430 ಕಿ.ಮೀ ಒತ್ತುವರಿ ತೆರವು ಮಾಡಲಾಗಿದೆ. ಇದನ್ನು ನಿರಂತರವಾಗಿ ಮುಂದುವರಿಸಲಾಗುವುದು. ಪಾದಚಾರಿ ಮಾರ್ಗಗಳಲ್ಲಿ ಬೀದಿ ಬದಿ ವ್ಯಾಪಾರಿಗಳನ್ನು ಮಾತ್ರವಲ್ಲದೆ, ಶಾಪ್ಸ್, ಪೆಟ್ಟಿ ಅಂಗಡಿಗಳು, ತಳ್ಳುವ ಗಾಡಿಗಳು, ಶೀಟ್ಸ್/ಮೇಲ್ಚಾವಣಿ/ಕೆನೋಪಿ, ಮೆಟ್ಟಿಲುಗಳುರ‍್ಯಾಂಪ್ಸ್/ತಡೆಗೋಡೆಗಳು, ಜಾಹೀರಾತು/ನಾಮಫಲಕಗಳು, ತಾತ್ಕಾಲಿಕ/ಶಾಶ್ವತ ಶೆಡ್ ಗಳುನ್ನು ಕೂಡಾ ತೆರವುಗೊಳಿಸಲಾಗುತ್ತಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಪಾರ್ಕಿಂಗ್, ಗಾರ್ಡನ್ ಸೇರಿದಂತೆ ಪಾದಚಾರಿ ಮಾರ್ಗಗಳಲ್ಲಿರುವ ಎಲ್ಲಾ ಅಡೆತಡೆಗಳನ್ನು ಹಂತ-ಹಂತವಾಗಿ ಕೈಗೆತ್ತಿಕೊಳ್ಳುತ್ತೇವೆ. ಸುಪ್ರಿಂ ಕೋರ್ಟ್ ಅದೇಶ್ ಹಾಗೂ ಬೀದಿ ಬದಿ ವ್ಯಾಪಾರಿಗಳಿಗಾಗಿ ಇರುವ ಕಾಯ್ದೆ/ಕಾನೂನು ಅನುಷ್ಟಾನವನ್ನು ಪಾಲಿಸಲು ಕ್ರಮ ಕೈಗೊಳ್ಳಲಾಗುವುದು. ಸುಪ್ರಿಂ ಕೋರ್ಟ್ ಕೋರ್ಟ್ ನವರು ಹೊಸ ಐಡಿ ಕೊಡಲು ಹೇಳಿದ್ದಾರೆ, ವಿತರಿಸಲು ಹೇಳಿದ್ದೇನೆ. ಸುಪ್ರಿಂ ಕೋರ್ಟ್ ನಿರ್ದೇಶನದಂತೆ ಹೊಸ ಗುರುತಿನ ಚೀಟಿಗಳನ್ನು ತ್ವರಿತವಾಗಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ ಎಂದು ಹೇಳಿದರು.

ಸಭೆಯಲ್ಲಿ ಮಾಜಿ ರಾಜ್ಯಸಭಾ ಸಂಸದರಾದ ಶ್ರೀ ರಾಜೀವ್ ಗೌಡ, ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್, ಕಾನೂನು ಕೋಶ ವಿಭಾಗದ ಮುಖ್ಯಸ್ಥರಾದ ಚಂದ್ರ ಶೇಖರ್ ಪಾಟೀಲ್, ಸಹಾಯ ಆಯುಕ್ತರಾದ ಮುರಳಿ, ಬೀದಿ ಬದಿ ವ್ಯಾಪಾರಿಗಳ ಸಂಘಟನೆಗಳ ಪದಾಧಿಕಾರಿಗಳು ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments