Homeಕರ್ನಾಟಕಆಗಸ್ಟ್ 6ರಿಂದ ಮುಂಗಾರು ಅಧಿವೇಶನ ಪ್ರಾರಂಭ: ಸಿಎಂ ಡಿ ಕೆ ಶಿವಕುಮಾರ್

ಆಗಸ್ಟ್ 6ರಿಂದ ಮುಂಗಾರು ಅಧಿವೇಶನ ಪ್ರಾರಂಭ: ಸಿಎಂ ಡಿ ಕೆ ಶಿವಕುಮಾರ್

ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ ನೀರನ್ನು ಪೂರೈಸಬೇಕು, ತಮಿಳುನಾಡು ಪಾಲಿನ ನೀರು ಹರಿಸುವ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. 15ರಂದು ಕಾವೇರಿ ಮಂಡಳಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ನಮ್ಮ ರಾಜ್ಯದ ವಾದ ಮಂಡಿಸುತ್ತೇವೆ. ನಂತರ ತೀರ್ಮಾನವನ್ನು ತಿಳಿಸುತ್ತೇವೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು.

ಮಂಡ್ಯ ಶಾಸಕರು ಕಾವೇರಿ ನೀರು ಬಿಡುವಂತೆ ಮನವಿ ಮಾಡಿರುವ ಬಗ್ಗೆ ಕೇಳಿದಾಗ, “ಮಂಡ್ಯದವರು, ಶ್ರೀರಂಗಪಟ್ಟಣದವರು, ಜಿಲ್ಲಾ ಸಚಿವರು ಬಂದು ಭೇಟಿ ಮಾಡಿದ್ದರು. ಸಭೆ ಬಳಿಕ ತೀರ್ಮಾನ ತಿಳಿಸುತ್ತೇವೆ” ಎಂದು ಹೇಳಿದರು.

ಕೆಪಿಎಸ್ ಸಿ ಅಧ್ಯಕ್ಷರ ಅಮಾನತ್ತಿನ ಬಗ್ಗೆ ಕೇಳಿದಾಗ, “ರಾಜ್ಯಪಾಲರು ಈ ಆದೇಶ ಮಾಡಿದ್ದಾರೆ. ಅವರ ನಂತರ ಯಾರು ಹಿರಿಯರು ಇದ್ದಾರೋ ಅವರಿಗೆ ಜವಾಬ್ದಾರಿ ನೀಡುವಂತೆ ನಿರ್ದೇಶನ ನೀಡಿದ್ದೇನೆ” ಎಂದರು.

ತಿರುಪತಿಯಲ್ಲಿ ಮೊದಲ ಆರತಿ ಕರ್ನಾಟಕ ರಾಜ್ಯದವರಿಗೆ ಎಂಬ ತೀರ್ಮಾನದ ಬಗ್ಗೆ ಕೇಳಿದಾಗ, “ತಿರುಪತಿಯಲ್ಲಿ ಮಹಾರಾಜರ ಕಾಲದಿಂದಲೂ ಮೊದಲ ಆರತಿ ಕರ್ನಾಟಕದ್ದಾಗಿದೆ. ಅಲ್ಲಿ ಪ್ರತಿದಿ‌ನ ಅಧಿಕಾರಿಯೊಬ್ಬರು ಆರತಿ ಪಡೆಯುತ್ತಾರೆ. ಆ ಅಧಿಕಾರಿ ಬದಲಿಗೆ ಇಲ್ಲಿಂದ ದರ್ಶನಕ್ಕೆ ಹೋಗುವ ಜನಪ್ರತಿನಿಧಿಗಳು, ನ್ಯಾಯಾಧೀಶರು, ಅಧಿಕಾರಿಗಳಿಗೆ, ಸಂಸದರು, ಮೇಯರ್, ತಹಶೀಲ್ದಾರ್ ಸೇರಿದಂತೆ ನಮ್ಮ ರಾಜ್ಯದವರಿಗೆ ಅವಕಾಶ ನೀಡಲಾಗುವುದು. ಇದು ನಿರ್ದಿಷ್ಟ ಪಕ್ಷಕ್ಕೆ ಎಂದು ಸೀಮಿತವಲ್ಲ. ಯಾವುದೇ ಪಕ್ಷದ ಜನಪ್ರತಿನಿಧಿಗಳು ಹೋದರು ಈ ಅವಕಾಶ ಅವರಿಗೆ ಸಿಗಬೇಕು. ಇದಕ್ಕೆ ನಿರ್ದಿಷ್ಟ ಮಾರ್ಗಸೂಚಿಗಳಿದ್ದು, ಅದರಂತೆಯೇ ಈ ಅವಕಾಶ ನೀಡಲಾಗುವುದು. ನಮ್ಮ ತೀರ್ಮಾನ ಕೇವಲ ಆರತಿ ವಿಚಾರಕ್ಕೆ ಮಾತ್ರ. ಉಳಿದಂತೆ ಎಲ್ಲಾ ಮಾರ್ಗಸೂಚಿಗಳು ತಿರುಪತಿ ಆಡಳಿತ ಮಂಡಳಿಯಂತೆ ಇರಲಿದೆ. ಅವರ ಮಾರ್ಗಸೂಚಿಯಲ್ಲಿ ನಾವು ಹಸ್ತಕ್ಷೇಪ ಮಾಡುವುದಿಲ್ಲ” ಎಂದು ತಿಳಿಸಿದರು.

ಆಗಸ್ಟ್ 6ರಿಂದ ಮುಂಗಾರು ಅಧಿವೇಶನ

“ಸಚಿವ ಸಂಪುಟ ಸಭೆ ಯಾವಾಗ, ದೆಹಲಿಗೆ ಹೋಗುವುದು ಯಾವಾಗ ಎಂದು ಕೇಳಿದಾಗ, “ಆಗಸ್ಟ್ 6ರಿಂದ ಅಧಿವೇಶನ ಕರೆಯಲು ತೀರ್ಮಾನಿಸಲಾಗಿದೆ. ನಾನು ಒಂದು ದಿನ ಕೆಲಸದ ಮೇಲೆ ದೆಹಲಿಗೆ ಹೋಗಿ ಬರುತ್ತೇನೆ. ನಂತರ ನಮ್ಮ ನಾಯಕರು ಮೂರ್ನಾಲ್ಕು ದಿನಗಳಲ್ಲಿ ದಿನಾಂಕ ನಿಗದಿ ಮಾಡುತ್ತಾರೆ. ನಂತರ ನಾನು ದೆಹಲಿಗೆ ಹೋಗುವೆ” ಎಂದು ಮಾಹಿತಿ ನೀಡಿದರು.

“ಮಾಜಿ ಸಂಸದರಾದ ಹೆಚ್ ಹನುಮಂತಪ್ಪ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುತ್ಸದಿ. ಮೂರು ಬಾರಿ ರಾಜ್ಯಸಭೆ ಸದಸ್ಯರಾಗಿದ್ದರು. ರೈಲ್ವೇ ಆಯೋಗಕ್ಕೆ ಅಧ್ಯಕ್ಷರಾಗಿದ್ದರು. 45 ವರ್ಷಗಳಿಂದ ನನಗೆ ಆತ್ಮೀಯರಾಗಿದ್ದರು. ನಮ್ಮ ಪಕ್ಷದ ಉಪಾಧ್ಯಕ್ಷರಾಗಿ, ಸಂಸದೀಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ನಾನು, ಕೆಪಿಸಿಸಿ ಅದ್ಯಕ್ಷರಾದ ಬಿ ಕೆ ಹರಿಪ್ರಸಾದ್, ಡಿಸಿಎಂ ಪರಮೇಶ್ವರ್, ಸಚಿವರಾದ ಮುನಿಯಪ್ಪ ಅವರು ಅವರಿಗೆ ಅಂತಿಮ ನಮನ ಸಲ್ಲಿಸಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ರಾಜ್ಯ ಹಾಗೂ ರಾಷ್ಟ್ರದ ಸಮಸ್ಯೆಗಳಿಗೆ ಮಾರ್ಗದರ್ಶನ ಕೊಟ್ಟ ಹಿರಿಯ ನಾಯಕರು. ಅವರಿಗೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments