Homeಕರ್ನಾಟಕವಿಜಯಪುರ ಜಿಲ್ಲೆಯಲ್ಲಿ ಬರ ವೀಕ್ಷಣೆ ಮಾಡಿದ ನಿಖಿಲ್ ಕುಮಾರಸ್ವಾಮಿ 

ವಿಜಯಪುರ ಜಿಲ್ಲೆಯಲ್ಲಿ ಬರ ವೀಕ್ಷಣೆ ಮಾಡಿದ ನಿಖಿಲ್ ಕುಮಾರಸ್ವಾಮಿ 

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗಸನಾಳ ಗ್ರಾಮದ ದೌಲತ್ತ ಬಗಲಿ ರೈತರ ಭೂಮಿಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬರ ವೀಕ್ಷಣೆ ಮಾಡಿದರು.

ವಿಜಯಪುರದಲ್ಲಿ ಬರದ ಛಾಯೆ. ಮಳೆ ಇಲ್ಲದೆ ರೈತ ಸಮುದಾಯ ಕಂಗಾಲಾಗಿದೆ. ಬಿತ್ತನೆಯೇ ಆಗದೆ ಉಳಿದಿರೋ ಜಮೀನುಗಳು, ಮಳೆ ಇಲ್ಲದ ಕಾರಣ ಬಿತ್ತನೆ ಮಾಡದ ರೈತರ ಅಳಲನ್ನು ನಿಖಿಲ್ ಕುಮಾರಸ್ವಾಮಿ ಆಲಿಸಿದರು.

ನಂತರ ಮಣ್ಣೆತ್ತಿನ ಅಮವಾಸ್ಯೆ ಹಿನ್ನೆಲೆ ಎತ್ತುಗಳಿಗೆ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ, ಬರ ಘೋಷಣೆ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.

ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ ಕೃಷ್ಣರೆಡ್ಡಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರು, ಸುರೇಶ್ ಬಾಬು, ಇಂಡಿ ಮುಖಂಡರಾದ ಬಿಡಿ ಪಾಟೀಲ್, ಅಪ್ಪು ಗೌಡ ಪಾಟೀಲ್ ಮನಗೂಳಿ, ದೊಡ್ಡಪ್ಪಗೌಡ ಪಾಟೀಲ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments