ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ಸಮುದಾಯದ ಒಟ್ಟು 14000 ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ವೀರಶೈವ ಲಿಂಗಾಯತ ಮಹಾಸಭಾದಿಂದ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ ಎಂದು ಸಭಾದ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 13500 ವಿದ್ಯಾರ್ಥಿಗಳಿಗಷ್ಟೇ ಅಲ್ಲದೆ ಕೇರಳ, ಮಹಾರಾಷ್ಟ್ರ, ತಮಿಳುನಾಡು ಮತ್ತು ತೆಲಂಗಾಣದ ವಿದ್ಯಾರ್ಥಿಗಳಿಗೂ ಮಹಾಸಭಾದಿಂದ ಪುರಸ್ಕಾರ ನೀಡಲಾಗುತ್ತಿದೆ ಎಂದರು.
ಆರು ರಾಜ್ಯಗಳಿಂದ ಒಟ್ಟು 16117 ಅರ್ಜಿಗಳು ಬಂದಿದ್ದು, ಪರಿಶೀಲನೆಯ ಬಳಿಕ 14000 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ, ನಗದು ಪುರಸ್ಕಾರ ನೀಡಲು ಮಹಾಸಭಾದ ಕಾರ್ಯಕಾರಿ ಮಂಡಳಿ ತೀರ್ಮಾನ ಕೈಗೊಂಡಿತು. ಇತ್ತೀಚೆಗೆ ಸುಜ್ಞಾನಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಘಟಕದ ವತಿಯಿಂದ 800ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ತಲಾ 1 ಸಾವಿರ ರೂ. ನಗದು, ಪ್ರಶಸ್ತಿ ಪತ್ರ ನೀಡಲಾಯಿತು ಎಂದು ಈಶ್ವರ ಖಂಡ್ರೆ ತಿಳಿಸಿದರು.


