Homeಕರ್ನಾಟಕಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ, ಮೋದಿ ಸೇರಿ ಗಣ್ಯರಿಂದ ಸಂತಾಪ

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ, ಮೋದಿ ಸೇರಿ ಗಣ್ಯರಿಂದ ಸಂತಾಪ

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ 85 ವರ್ಷದ ಚೆನ್ನಮ್ಮ ಶನಿವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಾಲ್ಕು ದಿನಗಳಿಂದ ಐಸಿಯುನಲ್ಲಿ ಚೆನ್ನಮ್ಮಗೆ ಚಿಕಿತ್ಸೆ ನೀಡಲಾಗುತ್ತಿದ್ದು ಆದರೆ ಇಂದು ಸಂಜೆ 4.30ರ ಸುಮಾರಿಗೆ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾರೆ.

ಹಾಸನ ತಾಲೂಕಿನ ಮುತ್ತಿಗೆ ಹಿರೇಹಳ್ಳಿಯ ಚೆನ್ನಮ್ಮ ಅವರು 1954 ಮೇ 25ರಂದು ಹೆಚ್​​.ಡಿ. ದೇವೇಗೌಡರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ದಂಪತಿಗೆ 6 ಜನ ಮಕ್ಕಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರಿಂದ ಸಂತಾಪ

“ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರ ಪತ್ನಿ ಶ್ರೀಮತಿ ಚೆನ್ನಮ್ಮನವರ ನಿಧನದಿಂದ ತೀವ್ರ ದುಃಖವಾಗಿದೆ. ಅವರು ತಮ್ಮ ವಿನಯ ಮತ್ತು ಸಮಾಜ ಸೇವೆಯ ಮೇಲಿನ ಬದ್ಧತೆಗಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು. ಈ ದುಃಖದ ಸಮಯದಲ್ಲಿ,  ದೇವೇಗೌಡರು ಮತ್ತು ಅವರ ಇಡೀ ಕುಟುಂಬಕ್ಕೆ ನನ್ನ ಹೃದಯಪೂರ್ವಕ ಸಂತಾಪಗಳು” ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂತಾಪ ನುಡಿಗಳನ್ನು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments