ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಲೋಕಭವನದ ಗಾಜಿನ ಮನೆಯಲ್ಲಿ ನಾಳೆ ಮಧ್ಯಾಹ್ನ 2 ಗಂಟೆಗೆ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಜೊತೆ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ದೆಹಲಿಯಲ್ಲಿ ಹೈಕಮಾಂಡ್ ನಾಯಕರ ಜತೆ ಸರಣಿ ಸಭೆಯಲ್ಲಿ ನಿರತರಾಗಿದ್ದಾರೆ. ಇಂದೇ ಸಚಿವರ ಪಟ್ಟಿ ಅಂತಿಮಗೊಳ್ಳಲಿದೆ.
ಕರ್ನಾಟಕದ ಲೋಕಭವನದಲ್ಲಿ ನೂತನ ಸಚಿವರುಗಳ ಅಧಿಕಾರ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ದಿನಾಂಕ:22.07.2026ರಂದು ಏರ್ಪಡಿಸಿದ್ದು, ಸದರಿ ದಿನದಂದು, ಲೋಕಭವನದ ಗಾಜಿನ ಮನೆಯಲ್ಲಿ ಅಧಿಕೃತ ಗುತ್ತಿಗೆದಾರರಾದ ಮೆ. ತಿಬ್ಬಾದೇವಿ ಟೆಂಟ್ಹೌಸ್, ಬೆಂಗಳೂರು ಇವರ ವತಿಯಿಂದ ಅಗತ್ಯ ಪೀಠೋಪಕರಣ, ಜರ್ಮನ್ ಟೆಂಟ್ ಹಾಗೂ ಕಾರ್ಪೆಟ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ.


