Homeಕರ್ನಾಟಕಪ್ರವಾಸೋದ್ಯಮ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ

ಪ್ರವಾಸೋದ್ಯಮ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅಧಿಕಾರ ಸ್ವೀಕಾರ

ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ನೂತನ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಡಾ. ವಿ. ರಾಮ್ ಪ್ರಸಾತ್ ಮನೋಹರ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ಪ್ರಸ್ತುತ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ರಾಮ್ ಪ್ರಸಾತ್ ಮನೋಹರ್ ಅವರಿಗೆ, ರಾಜ್ಯ ಸರ್ಕಾರವು ಇತ್ತೀಚೆಗೆ ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿ ಆದೇಶ ಹೊರಡಿಸಿತ್ತು.

ಇದಕ್ಕೂ ಮೊದಲು ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕರಾಗಿ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ವ್ಯವಸ್ಥಾಪಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಅವರು, ಇಲಾಖೆಯ ಕಾರ್ಯವೈಖರಿ, ಪ್ರವಾಸೋದ್ಯಮ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹೂಡಿಕೆ ಉತ್ತೇಜನ ಕ್ಷೇತ್ರಗಳಲ್ಲಿ ಸಮೃದ್ಧ ಅನುಭವ ಹೊಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments