Homeಕರ್ನಾಟಕಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ವಿದ್ಯಾರ್ಥಿಗಳಿಗೆ ಸಂದ ಮೊದಲ ಜಯ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ವಿದ್ಯಾರ್ಥಿಗಳಿಗೆ ಸಂದ ಮೊದಲ ಜಯ

ನೀಟ್ ವಿವಾದದ ಖಂಡಿಸಿ ಪ್ರತಿಭಟನೆಗೆ ಇಳಿದಿದ್ದ ವಿದ್ಯಾರ್ಥಿಗಳ ಪ್ರತಿಭಟನೆಗೆ ಮೊದಲ ಜಯ ಸಿಕ್ಕಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿದ್ದು, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಜಿರಳೆ ಜನತಾ ಪಕ್ಷ (ಸಿಜೆಪಿ) ಬಿಗಿಪಟ್ಟು ಹಿಡಿದಿತ್ತು. ‘ಪ್ರಧಾನ್ ರಾಜೀನಾಮೆ ಬೇಡಿಕೆಯಲ್ಲಿ ಯಾವುದೇ ರಾಜಿಯಿಲ್ಲ ಎಂದು ಕೇಂದ್ರ ಸಚಿವರಿಗೆ ತಿಳಿಸಿದ್ದೇವೆ. ನೀಟ್‌ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡವರ ಕುಟುಂಬಗಳಿಗೆ 1 ಕೋಟಿ ರು. ಪರಿಹಾರ ನೀಡಬೇಕು ಹಾಗೂ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಹಿಂಪಡೆಯಬೇಕು ಎಂದು ಆಗ್ರಹಿಸಿದ್ದೇವೆ ಎಂದು ಸಿಜೆಪಿ ವಕ್ತಾರರು ಹೇಳಿದ್ದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ದೇಶದ ಯುವಜನತೆ ಹಾಗೂ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಂಡಿರುವುದಾಗಿ ಅವರು ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ (X) ನಲ್ಲಿ ಪ್ರಕಟಿಸಿರುವ ಎರಡು ಪುಟಗಳ ಪತ್ರದಲ್ಲಿ ದೇಶದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿರುವ ಧರ್ಮೇಂದ್ರ ಪ್ರಧಾನ್, ‘ನೀಟ್-ಯುಜಿ 2026 ಪರೀಕ್ಷೆಗೆ ಸಂಬಂಧಿಸಿದ ಬೆಳವಣಿಗೆಗಳ ನೈತಿಕ ಹೊಣೆಯನ್ನು ಮೊದಲ ದಿನದಿಂದಲೇ ತಾವು ಹೊತ್ತಿದ್ದು, ಪರಿಸ್ಥಿತಿಯಿಂದ ಎಂದಿಗೂ ಹಿಂದೆ ಸರಿಯಲಿಲ್ಲ’ ಎಂದು ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments