Homeಕರ್ನಾಟಕಧರ್ಮೇಂದ್ರ ಪ್ರಧಾನ್ ರಾಜೀನಾಮೆ, ವಿದ್ಯಾರ್ಥಿಗಳ ಸಂಘಟಿತ ಧ್ವನಿಗೆ ದೊರೆತ ಜಯ: ಬಿ ಕೆ ಹರಿಪ್ರಸಾದ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ವಿದ್ಯಾರ್ಥಿಗಳ ಸಂಘಟಿತ ಧ್ವನಿಗೆ ದೊರೆತ ಜಯ: ಬಿ ಕೆ ಹರಿಪ್ರಸಾದ್

ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಅಕ್ರಮಗಳು ಮತ್ತು ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಗಳ ವಿರುದ್ಧ ದೇಶದ ವಿದ್ಯಾರ್ಥಿ–ಯುವಜನತೆ ನಡೆಸಿದ ನಿರಂತರ ಹೋರಾಟಕ್ಕೆ ಮಣಿದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಸಲ್ಲಿಸಿರುವುದು ವಿದ್ಯಾರ್ಥಿಗಳ ಸಂಘಟಿತ ಧ್ವನಿಗೆ ದೊರೆತ ಮೊದಲ ಜಯವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ.

ಬೆಂಗಳೂರಿನ ಕೆ.ಆರ್. ಪುರಂನಲ್ಲಿ ಆಯೋಜಿಸಿದ್ದ ‘ವಿದ್ಯಾರ್ಥಿಗಳ ಧ್ವನಿ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ವಿದ್ಯಾರ್ಥಿ ಸಮುದಾಯದ ಸಮಸ್ಯೆಗಳು, ಶಿಕ್ಷಣ ವ್ಯವಸ್ಥೆಯಲ್ಲಿನ ಲೋಪಗಳು ಹಾಗೂ ಯುವಜನರ ಭವಿಷ್ಯದ ಕುರಿತು ಮಾತನಾಡಿದರು.

ವಿದ್ಯಾರ್ಥಿಗಳ ನ್ಯಾಯಯುತ ಹೋರಾಟದೊಂದಿಗೆ ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ ಸದಾ ದೃಢವಾಗಿ ನಿಲ್ಲಲಿದೆ. ಅವರ ಶಿಕ್ಷಣ, ಉದ್ಯೋಗ ಮತ್ತು ಭವಿಷ್ಯದ ಹಕ್ಕುಗಳಿಗಾಗಿ ನಮ್ಮ ಹೋರಾಟ ನಿರಂತರವಾಗಿರಲಿದೆ ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments