ಲೋಕಭವನದ ಗಾಜಿನ ಮನೆಯಲ್ಲಿ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ಸಮಾರಂಭಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರು ಹಾಗೂ ಅತಿಥಿಗಳಿಗಾಗಿ ಹೊರಭಾಗದಲ್ಲಿ ಜರ್ಮನ್ ಟೆಂಟ್ ಅಳವಡಿಸಲಾಗಿದ್ದು, ಲೋಕೋಪಯೋಗಿ ಇಲಾಖೆಯು ಮೂರು ದಿನಗಳ ಹಿಂದೆಯೇ ಸಿದ್ಧತಾ ಕಾರ್ಯಗಳನ್ನು ಆರಂಭಿಸಿದೆ. ಭದ್ರತಾ ದೃಷ್ಟಿಯಿಂದ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಲೋಕಭವನ ಸುತ್ತಮುತ್ತ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ.
ಇದಕ್ಕೂ ಮುನ್ನ ನವದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕುರಿತು ಅಂತಿಮ ಹಂತದ ಚರ್ಚೆ ನಡೆಯಿತು.
ಸುಮಾರು 45 ನಿಮಿಷಗಳ ಕಾಲ ನಡೆದ ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟ ಸೇರಲಿರುವ ನೂತನ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಒತ್ತಿದ್ದಾರೆ.
ನೂತನ ಸಚಿವರ ಪಟ್ಟಿ



