Homeಕರ್ನಾಟಕಹನೂರು ಎನ್‌ಕೌಂಟರ್ ಬಗ್ಗೆ ಗಂಭೀರ ಅನುಮಾನ; ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು: ಬಿ.ವೈ. ವಿಜಯೇಂದ್ರ ಆಗ್ರಹ

ಹನೂರು ಎನ್‌ಕೌಂಟರ್ ಬಗ್ಗೆ ಗಂಭೀರ ಅನುಮಾನ; ಸರ್ಕಾರ ಸ್ಪಷ್ಟ ಉತ್ತರ ನೀಡಬೇಕು: ಬಿ.ವೈ. ವಿಜಯೇಂದ್ರ ಆಗ್ರಹ

ಕಾಡಂಚಿನ ಜನರು ಹಾಗೂ ಅರಣ್ಯಾಧಿಕಾರಿಗಳ ನಡುವಿನ ಸಂಘರ್ಷ ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರವಾಗಿ ನಡೆಯುತ್ತಿದೆ. ಶಿವಮೊಗ್ಗ, ಉತ್ತರ ಕನ್ನಡ, ಮಡಿಕೇರಿ ಹಾಗೂ ಕರಾವಳಿ ಭಾಗಗಳಲ್ಲೂ ಇಂತಹ ಘಟನೆಗಳು ನಡೆಯುತ್ತಿರುವುದು ಆತಂಕಕಾರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿದರು

ಹನೂರು ಬಳಿ ಇತ್ತೀಚೆಗೆ ನಡೆದಿರುವ ಅರಣ್ಯ ಎನ್‌ಕೌಂಟರ್ ಪ್ರಕರಣದ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಅರಣ್ಯಾಧಿಕಾರಿಗಳು ತಮ್ಮ ಆತ್ಮರಕ್ಷಣೆಗಾಗಿ ಎನ್‌ಕೌಂಟರ್ ನಡೆದಿದೆ ಎಂದು ಹೇಳುತ್ತಿರುವುದು ಸಾಕಷ್ಟು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಈ ಪ್ರಕರಣದ ಬಗ್ಗೆ ಗಂಭೀರ ಚರ್ಚೆ ನಡೆಯಬೇಕು ಎಂದು ಆಗ್ರಹಿಸಿದರು.

ಅರಣ್ಯ ಪ್ರದೇಶಗಳಲ್ಲಿ ವಾಸಿಸುವ ಜನರು ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ನಡುವೆ ಸಂಘರ್ಷ ನಿರಂತರವಾಗಿ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಅಧಿಕಾರಿಗಳು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆಯೇ ಎಂಬ ಅನುಮಾನ ಮೂಡಿರುವ ಹನೂರು ಘಟನೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ವಿಜಯೇಂದ್ರ ಒತ್ತಾಯಿಸಿದರು.

“ಹನೂರು ಎನ್‌ಕೌಂಟರ್‌ಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಸರ್ಕಾರ ಯಾವ ಕ್ರಮ ಕೈಗೊಳ್ಳಲಿದೆ? ಅವರನ್ನು ಅಮಾನತು ಮಾಡುತ್ತೀರಾ? ಅಥವಾ ಬೇರೆ ಯಾವ ಕ್ರಮ ಕೈಗೊಳ್ಳುತ್ತೀರಿ? ಘಟನೆಗೆ ಬಲಿಯಾದ ಕುಟುಂಬಕ್ಕೆ ಸರ್ಕಾರದಿಂದ ಎಷ್ಟು ಪರಿಹಾರ ನೀಡಲಾಗುತ್ತದೆ?” ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದರು.

ಘಟನೆಯ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಿ, ಸತ್ಯಾಸತ್ಯತೆಗಳನ್ನು ರಾಜ್ಯದ ಜನತೆ ಹಾಗೂ ಸದನದ ಮುಂದೆ ಬಹಿರಂಗಪಡಿಸಬೇಕು. ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ಹನೂರು ಎನ್‌ಕೌಂಟರ್ ಪ್ರಕರಣದಲ್ಲಿ ಸರ್ಕಾರದ ಕ್ರಮವೇನು ಎಂಬುದನ್ನು ಸದನಕ್ಕೆ ಸ್ಪಷ್ಟಪಡಿಸಬೇಕು. ಅಧಿಕಾರಿಗಳ ವಿರುದ್ಧ ಕಾನೂನುಬದ್ಧ ಕ್ರಮ ಹಾಗೂ ಸಂತ್ರಸ್ತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವ ಬಗ್ಗೆ ಸರ್ಕಾರ ಉತ್ತರಿಸಬೇಕು ಎಂದು ಅವರು ಒತ್ತಾಯಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments