Homeಕರ್ನಾಟಕಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಪ್ರಕಟ

ಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಪ್ರಕಟ

ಕರ್ನಾಟಕ ನಾಟಕ ಅಕಾಡೆಮಿಯ 2026-7ನೇ ಸಾಲಿನ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಕಲಾವಿದ ಡಾ.ಮುಖ್ಯಮಂತ್ರಿ ಚಂದ್ರು ಅವರು ‘ಜೀವಮಾನ ರಂಗಸಾಧನೆ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.

ಅಕಾಡೆಮಿಯ ಅಧ್ಯಕ್ಷರಾದ ಡಾ.ಕೆ.ವಿ.ನಾಗರಾಜ ಮೂರ್ತಿ ನೇತೃತ್ವದ ಕಾರ್ಯಕಾರಿ ಸಮಿತಿಯು ಈ ಆಯ್ಕೆಯನ್ನು ಮಾಡಿ, ಪಟ್ಟಿಯನ್ನು ಗುರುವಾರ ಬಿಡುಗಡೆ ಮಾಡಿದೆ. ‘ಜೀವಮಾನ ರಂಗಸಾಧನೆ ಪ್ರಶಸ್ತಿ’ಯು ₹ 50 ಸಾವಿರ ನಗದು ಹಾಗೂ ನಟರಾಜ ವಿಗ್ರಹ, ಫಲಕವನ್ನು ಒಳಗೊಂಡಿದೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಧಾರವಾಡದ ವಿಶ್ವೇಶ್ವರಿ ಬಸವಲಿಂಗಯ್ಯ ಹಿರೇಮಠ, ಇಳಕಲ್‌ನ ರಮೇಶ ತಿಪ್ಪಣ್ಣ ಚಿತ್ರಗಾರ, ಆರ್.ರಾಮಕೃಷ್ಣ, ಅನಸೂಯ ರೇವಣ ಸಿದ್ದಯ್ಯ ಹೊಸೂರುಮಠ ಸೇರಿದಂತೆ 23 ರಂಗ ಸಾಧಕರು ವಾರ್ಷಿಕ ‘ರಂಗಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ ತಲಾ ₹25 ಸಾವಿರ ನಗದು ಬಹುಮಾನ ಹಾಗೂ ನಟರಾಜ ವಿಗ್ರಹ, ಫಲಕವನ್ನು ಒಳಗೊಂಡಿದೆ.

‘ಕಲ್ಬರ್ಡ್ ಕಮೆಡಿಯನ್ ಕೆ.ಹಿರಣ್ಣಯ್ಯ ದತ್ತಿ ಪುರಸ್ಕಾರ’ಕ್ಕೆ ಚಿತ್ರದುರ್ಗದ ಚಂದ್ರಮ್ಮ. ‘ನಟರತ್ನ ಚಿಂದೋಡಿ ವೀರಪ್ಪನವರ ದತ್ತಿ ಪುರಸ್ಕಾರ’ಕ್ಕೆ ಕುಣಿಗಲ್‌ನ ಗಂಗಾಧರ್ ರೆಡ್ಡಿ, ‘ಪದ್ಮಶ್ರೀ ಚಿಂದೋಡಿ ಲೀಲಾ ದತ್ತಿ ಪುರಸ್ಕಾರ ಪ್ರಶಸ್ತಿ’ಗೆ ತುಮಕೂರಿನ ವೈ.ಎನ್.ಶಿವಣ್ಣ, ಮಾಲತಿಶ್ರೀ ಮೈಸೂರು ದತ್ತಿನಿಧಿ ಪುರಸ್ಕಾರ’ಕ್ಕೆ ಗದಗದ ದಯಾನಂದ ಚ ಬೀಳಗಿ ಹಾಗೂ ‘ಕೆ. ರಾಮಚಂದ್ರಯ್ಯ ದತ್ತಿನಿಧಿ ಪುರಸ್ಕಾರ’ಕ್ಕೆ ಮೈಸೂರಿನ ಡಾ. ಎಂ.ಚಂದ್ರಪ್ಪ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಗಳು ತಲಾ ₹15 ಸಾವಿರ ನಗದು ಬಹುಮಾನ ಹಾಗೂ ನಟರಾಜ ವಿಗ್ರಹ ಫಲಕಗಳನ್ನು ಹೊಂದಿದೆ.

2026-27ನೇ ಸಾಲಿನ ಕ. ನಾಟಕ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಪುರಸ್ಕೃತರ ಪಟ್ಟಿ

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments