Homeಕರ್ನಾಟಕಕರ್ಪೂರಿ ಠಾಕೂರ್–ವಿ.ಪಿ. ಸಿಂಗ್ ಪ್ರಶಸ್ತಿ ಪ್ರದಾನ: ಸಾಧಕರಿಗೆ ಗೌರವ

ಕರ್ಪೂರಿ ಠಾಕೂರ್–ವಿ.ಪಿ. ಸಿಂಗ್ ಪ್ರಶಸ್ತಿ ಪ್ರದಾನ: ಸಾಧಕರಿಗೆ ಗೌರವ

ಬೆಂಗಳೂರು, ಆ.24: ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘ ಹಾಗೂ ವಿ. ನಾಗರಾಜು ಪ್ರತಿಷ್ಠಾನದ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಕರ್ಪೂರಿ ಠಾಕೂರ್ ಮತ್ತು ವಿ.ಪಿ. ಸಿಂಗ್ ಪ್ರಶಸ್ತಿ ಪ್ರದಾನ ಹಾಗೂ ಡಾ. ಎಂ.ಎಸ್. ಮಣಿಯವರ ‘ತೊಡರು ಬಳ್ಳಿ’ ಕೃತಿ ಬಿಡುಗಡೆ ಸಮಾರಂಭ ನಡೆಯಿತು.

ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಹಾಗೂ ತಮಿಳುನಾಡಿನ ಸಂಸದ ತಿರುಮಾವಳವನ್ ಅವರು ನೀರಿಗೆ ಮೀನಿನ ಮರಿಗಳನ್ನು ಬಿಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೇ ವೇಳೆ ಡಾ. ಎಂ.ಎಸ್. ಮಣಿಯವರ ‘ತೊಡರು ಬಳ್ಳಿ’ ಕೃತಿಯನ್ನು ಬಿಡುಗಡೆ ಮಾಡಲಾಯಿತು.

ವಿ.ಪಿ. ಸಿಂಗ್ ಪ್ರಶಸ್ತಿ ಪ್ರದಾನ

ಸಮಾಜದ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಕೊಡುಗೆ ನೀಡಿದ ಗಣ್ಯರಿಗೆ ವಿ.ಪಿ. ಸಿಂಗ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ. ದಿನೇಶ್ ಬಿ., ಸ್ಪರ್ಶ್ ಆಸ್ಪತ್ರೆಯ ಹೃದ್ರೋಗ ತಜ್ಞ ಡಾ. ನಾಗೇಶ್ ಬಸವರಾಜ, ರಾಜೀವ್ ಗಾಂಧಿ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ. ಶಶಿಭೂಷಣ್ ಬಿ.ಎಲ್., ಸಿಗಂಧೂರು ಚೌಡೇಶ್ವರಿ ದೇವಾಲಯದ ಧರ್ಮದರ್ಶಿ ಡಾ. ಎಸ್. ರಾಮಪ್ಪ, ಹಿರಿಯ ಪತ್ರಕರ್ತ ಡಾ. ರಾಜಶೇಖರ ಕಂಬಾರ, ಸಮಾಜ ಸೇವಕ ರಾ. ಲಕ್ಷ್ಮೀನಾರಾಯಣ್ (ಚಿನ್ನಿ) ಹಾಗೂ ಹಿರಿಯ ಪತ್ರಕರ್ತ ಕೆ.ಎಸ್. ಸೋಮಶೇಖರ್ (ಸೋಮಣ್ಣ) ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕರ್ಪೂರಿ ಠಾಕೂರ್ ಪ್ರಶಸ್ತಿ ಪ್ರದಾನ

ಸಾಮಾಜಿಕ ನ್ಯಾಯದ ಹೋರಾಟ ಹಾಗೂ ಸಮಾಜಮುಖಿ ಕ್ಷೇತ್ರದಲ್ಲಿ ಕೊಡುಗೆ ನೀಡಿದ ಗಣ್ಯರಿಗೆ ಕರ್ಪೂರಿ ಠಾಕೂರ್ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ್, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಬಿ.ಕೆ. ರವಿ, ಕರ್ನಾಟಕ ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷ ಎಂ. ಸಿದ್ದರಾಜು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಹಿರಿಯ ಪತ್ರಕರ್ತ ಲಕ್ಷ್ಮಣ ಕೊಡಸೆ, ಹಿರಿಯ ಪತ್ರಕರ್ತ ಗಂಗಾಧರ್ ಮೊದಲಿಯಾರ್, ಹಿರಿಯ ಪತ್ರಕರ್ತ ಐ.ಹೆಚ್. ಸಂಗಮದೇವ, ಹಿರಿಯ ಪತ್ರಕರ್ತ ರವಿ ಬಿದನೂರು (ರವೀಂದ್ರ ಬಿ.) ಹಾಗೂ ‘ದಿ ಹಿಂದೂ’ ಪತ್ರಿಕೆಯ ಪತ್ರಕರ್ತೆ ಮಿನಿ ತೇಜಸ್ವಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕರ್ನಾಟಕ ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಸಂಪಾದಕರ ಮತ್ತು ವರದಿಗಾರರ ಸಂಘದ ಅಧ್ಯಕ್ಷ ಗಂಧರ್ವ ಸೇನಾ, ಪ್ರಧಾನ ಕಾರ್ಯದರ್ಶಿ ವಿರೂಪಾಕ್ಷಪ್ಪ ಹೆಚ್.ಜಿ., ವಿ. ನಾಗರಾಜು ಪ್ರತಿಷ್ಠಾನದ ಅಧ್ಯಕ್ಷೆ ಪದ್ಮಾ ನಾಗರಾಜು ಸೇರಿದಂತೆ ಹಲವು ಗಣ್ಯರು, ಪತ್ರಕರ್ತರು ಹಾಗೂ ಸಮಾಜಮುಖಿ ಚಿಂತಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments