ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಗಜಪಡೆಯ ದಸರಾ ಪಯಣಕ್ಕೆ ಇಂದು ಹುಣಸೂರಿನ ವೀರನಹೊಸಹಳ್ಳಿಯಲ್ಲಿ ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ವಿದ್ಯುಕ್ತ ಚಾಲನೆ ನೀಡಿದರು.
ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಭಾಗವಹಿಸಲಿರುವ ಗಜಪಡೆಯನ್ನು ಸಾಂಪ್ರದಾಯಿಕವಾಗಿ ಮೈಸೂರಿನತ್ತ ಪಯಣಕ್ಕೆ ಚಾಲನೆ ನೀಡುವ ಮೂಲಕ ದಸರಾ ಸಿದ್ಧತೆಗೆ ಅಧಿಕೃತವಾಗಿ ಚಾಲನೆ ದೊರೆಯಿತು.
ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅನಿಲ್ ಚಿಕ್ಕಮಾದು, ಶ್ರೀ ಡಿ. ರವಿಶಂಕರ್, ಶ್ರೀ ಹರೀಶ್ ಗೌಡ, ಕೆಪಿಸಿಸಿ ವಕ್ತಾರರಾದ ಶ್ರೀ ಎಂ. ಲಕ್ಷ್ಮಣ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.


