ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ.ಪರಮೇಶ್ವರ ಅವರು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ರಂಗನಾಥಪುರ, ನಿಟ್ರೆ, ಸೋಮಹಳ್ಳಿ, ಶೀಗೆವಾಡಿ ಹಾಗೂ ಚಾಮರಾಜನಗರ ತಾಲೂಕಿನ ಮುಕ್ಕಡಹಳ್ಳಿ, ಹೆಗ್ಗೋಠಾರ ಗ್ರಾಮಗಳ ವಿವಿಧೆಡೆ ಬರ ಪರಿಶೀಲನೆ ನಡೆಸಿದರು.
ಕೃಷಿ ಮತ್ತು ತೋಟಗಾರಿಕೆ ಬೆಳೆಹಾನಿ, ಜಾನುವಾರುಗಳಿಗೆ ಮೇವಿನ ಕೊರತೆ, ವಿಬಿ-ಜಿ ರಾಮ್-ಜಿ ಯೋಜನೆಯಡಿ ಜನರಿಗೆ ಉದ್ಯೋಗ ನೀಡಿ ಕೈಗೊಂಡಿರುವ ಕಾಮಗಾರಿಯನ್ನು ಖುದ್ದು ವೀಕ್ಷಣೆ ಮಾಡಿ, ರೈತರ ಜೊತೆ ಮಾತುಕತೆ ನಡೆಸಿ ಅವರ ಕಷ್ಟವನ್ನು ಆಲಿಸಿದರು.
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ಪುಟ್ಟರಂಗ ಶೆಟ್ಟಿ, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ನಂಜನಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ದರ್ಶನ್ ದೃವನಾರಾಯಣ್, ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪ ಮುಂತಾದವರು ಇದ್ದರು.


