Homeಕರ್ನಾಟಕಬಾದಾಮಿಯಲ್ಲಿ ಮಾಜಿ ಸೈನಿಕರ ಸಮುದಾಯ ಭವನಕ್ಕೆ ಅಡಿಗಲ್ಲು

ಬಾದಾಮಿಯಲ್ಲಿ ಮಾಜಿ ಸೈನಿಕರ ಸಮುದಾಯ ಭವನಕ್ಕೆ ಅಡಿಗಲ್ಲು

ಬಾದಾಮಿ ತಾಲೂಕಿನ ಮಾಜಿ ಸೈನಿಕರ ಸಂಘದ ನೂತನ ಸಮುದಾಯ ಭವನದ ಅಡಿಗಲ್ಲು ಭೂಮಿ ಪೂಜೆ ಕಾರ್ಯಕ್ರಮವನ್ನು ಸೋಮವಾರ ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರಾದ ಶ್ರೀ ಭೀಮಸೇನ ಬಿ. ಚಿಮ್ಮನಕಟ್ಟಿ ಅವರು ಎಲ್ಲಾ ನಿವೃತ್ತ ಸೈನಿಕರ ಸಮ್ಮುಖದಲ್ಲಿ ಭೂಮಿ ಪೂಜೆ ಮಾಡಿ ಅಡಿಗಲ್ಲು ಹಾಕಿದರು. ಮಾಜಿ ಸೈನಿಕರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ಅಂದಾಜು ₹10 ಲಕ್ಷ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಚಾಲನೆ ನೀಡಿದರು. ಇದು ಸೈನಿಕರ ಸೇವೆಗೆ ಸಲ್ಲಿಸಿದ ಗೌರವದ ಸಂಕೇತವಾಗಿದೆ ಎಂದು ಶಾಸಕರು ಹೇಳಿದರು.

ದೇಶದ ಗಡಿಯಲ್ಲಿ ನಿಂತು ತಮ್ಮ ಪ್ರಾಣವನ್ನೇ ಪಣಕ್ಕಿಟ್ಟು ದೇಶವನ್ನು ರಕ್ಷಿಸಿದ ಸೈನಿಕರ ತ್ಯಾಗ ಮತ್ತು ಬಲಿದಾನದ ಮುಂದೆ ಯಾವುದೇ ಕೊಡುಗೆ ಶೂನ್ಯವೇ ಸರಿ. ಅವರ ಸೇವೆಯನ್ನು ಸ್ಮರಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಅವರು ತಿಳಿಸಿದರು.

ಮಾಜಿ ಸೈನಿಕರ ಕಲ್ಯಾಣಕ್ಕಾಗಿ ಮುಂದಿನ ದಿನಗಳಲ್ಲಿಯೂ ಇನ್ನಷ್ಟು ಅಗತ್ಯ ಸೌಲಭ್ಯಗಳು ಹಾಗೂ ಹೆಚ್ಚಿನ ಅನುದಾನ ಒದಗಿಸಲು ಬದ್ಧರಾಗಿದ್ದು, ಸಾಧ್ಯವಾದ ಎಲ್ಲಾ ಸಹಕಾರ ನೀಡುವುದಾಗಿ ಶಾಸಕರು ಭರವಸೆ ನೀಡಿದರು.

ಕಾರ್ಯಕ್ರಮಕ್ಕೆ ನಿವೃತ್ತ ಸೈನಿಕರು ಹಾಗೂ ಸ್ಥಳೀಯರು ವಿಶೇಷವಾಗಿ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments