Homeಕರ್ನಾಟಕರಾಜ್ಯದಲ್ಲೇ ನಂಬರ್-1: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಪ್ರಥಮ ಬಹುಮಾನ

ರಾಜ್ಯದಲ್ಲೇ ನಂಬರ್-1: ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಪ್ರಥಮ ಬಹುಮಾನ

– ಅಪೆಕ್ಸ್ ಬ್ಯಾಂಕ್ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಸಿಇಒ ವನಜಾಕ್ಷಿಗೆ ಪ್ರಶಸ್ತಿ ಪ್ರದಾನ

2025-26ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಹಕಾರ ಬ್ಯಾಂಕ್ ಆಗಿ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು (DCC) ರಾಜ್ಯದಲ್ಲಿ ಪ್ರಥಮ ಬಹುಮಾನ ಪಡೆದು ರಾಜ್ಯಮಟ್ಟದಲ್ಲಿ ಗಮನ ಸೆಳೆದಿದೆ.

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ವಾರ್ಷಿಕ ಮಹಾಸಭೆಯು ದಿನಾಂಕ 18-09-2026 ರಂದು ನಡೆದಿದ್ದು, ಈ ಸಮಾರಂಭದಲ್ಲಿ ಮಂಡ್ಯ DCC ಬ್ಯಾಂಕಿನ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ಪತ್ರ ಮತ್ತು ಬಹುಮಾನ ನೀಡಿ ಸನ್ಮಾನಿಸಲಾಗಿದೆ.

ಬ್ಯಾಂಕಿನ ಅಧ್ಯಕ್ಷರಾದ ಸಚಿನ್ ಚಲುವರಾಯಸ್ವಾಮಿ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸಿ.ವನಜಾಕ್ಷಿ ಅವರು ಪ್ರಶಸ್ತಿ ಸ್ವೀಕರಿಸಿದರು.

ಬ್ಯಾಂಕು ಉತ್ತಮವಾಗಿ ಕಾರ್ಯನಿರ್ವಹಿಸಲು ಸಹಕರಿಸಿದ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು ಹಾಗೂ ಬ್ಯಾಂಕಿನ ಸಮಸ್ತ ಸಿಬ್ಬಂದಿ ವರ್ಗದವರಿಗೆ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಧನ್ಯವಾದಗಳನ್ನು ಅರ್ಪಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments