Homeಕರ್ನಾಟಕರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು : ಸಚಿವ ಎನ್. ಚೆಲುವರಾಯಸ್ವಾಮಿ

ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು : ಸಚಿವ ಎನ್. ಚೆಲುವರಾಯಸ್ವಾಮಿ

ಜಲಸಂಪನ್ಮೂಲ ಇಲಾಖೆಯ ಮುಖ್ಯ ಇಂಜಿನಿಯರ್ ಕಚೇರಿಯ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಕಾರ್ಯಚಟುವಟಿಕೆಗಳು, ಯೋಜನೆಗಳ ಪ್ರಗತಿ ಹಾಗೂ ಮುಂದಿನ ಕಾರ್ಯಯೋಜನೆಗಳ ಕುರಿತು ಜಲಸಂಪನ್ಮೂಲ ಸಚಿವರಾದ ಎನ್. ಚೆಲುವರಾಯಸ್ವಾಮಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಗ್ರ ಪರಿಶೀಲನೆ ನಡೆಸಿದರು.

ತುರ್ತು AE ಮತ್ತು JE ಗಳ ನೇಮಕಕ್ಕೆ ಸಚಿವರ ಸೂಚನೆ

ಸಭೆಯಲ್ಲಿ ಮುಖ್ಯ ಇಂಜಿನಿಯರ್ ಕಚೇರಿಯ ಅಧೀನದಲ್ಲಿರುವ ವಿವಿಧ ಘಟಕಗಳ ಕಾರ್ಯವೈಖರಿ ಹಾಗೂ ಜವಾಬ್ದಾರಿಗಳ ಕುರಿತು ಸಚಿವರು ಮಾಹಿತಿ ಪಡೆದರು. ಜಲವಿಜ್ಞಾನ ಘಟಕ, ಯೋಜನೆ ಮತ್ತು ತನಿಖಾ ಘಟಕ , ತಾಂತ್ರಿಕ ಸಲಹಾ ಸಮಿತಿ, ಜಿಯೋಮ್ಯಾಟಿಕ್ಸ್ ಕೇಂದ್ರ, ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಘಟಕ ಹಾಗೂ ಆಡಳಿತ ಶಾಖೆಗಳ ಕಾರ್ಯಚಟುವಟಿಕೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಸಚಿವರು ತಕ್ಷಣವೇ ಇಲಾಖೆಯಲ್ಲಿ ಖಾಲಿ ಇರುವ ಎಲ್ಲಾ AE ಮತ್ತು JE ಗಳ ನೇಮಕಕ್ಕೆ ಸೂಚನೆ ನೀಡಿದರು.

ಜಲಸಂಪನ್ಮೂಲ ಯೋಜನೆಗಳ ಅನುಷ್ಠಾನದಲ್ಲಿ ವೈಜ್ಞಾನಿಕ ದತ್ತಾಂಶ, ಆಧುನಿಕ ತಂತ್ರಜ್ಞಾನ ಹಾಗೂ ನಿಖರವಾದ ತಾಂತ್ರಿಕ ಅಧ್ಯಯನಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಯೋಜನೆಗಳ ಪ್ರಗತಿ ಮತ್ತು ಗುಣಮಟ್ಟದ ಮೇಲೆ ನಿರಂತರ ನಿಗಾ ವಹಿಸಿ, ಅಗತ್ಯವಿರುವ ಕಡೆಗಳಲ್ಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಣೆಕಟ್ಟುಗಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಸಭೆಯಲ್ಲಿ ರಾಜ್ಯದ ವಿವಿಧ ಅಣೆಕಟ್ಟುಗಳ ಸುರಕ್ಷತೆ, ಸ್ಥಿರತೆ ಹಾಗೂ ಸುಸ್ಥಿತಿಯನ್ನ ಖಾತರಿಪಡಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಸಚಿವರು ಅಧಿಕಾರಿಗಳಿಂದ ಮಾಹಿತಿ ಪಡೆದರು. ಅಣೆಕಟ್ಟುಗಳ ಪೂರ್ಣ ಮಟ್ಟ ಹಾಗೂ ಮುಂಗಾರು ನೀರು ನಿರ್ವಹಣೆಗೆ ಸಂಬಂಧಿಸಿದ ಸುರಕ್ಷತಾ ಪರಿಶೀಲನೆಗಳ ಬಗ್ಗೆಯೂ ಚರ್ಚಿಸಲಾಯಿತು.

ನೀರಿಕ್ಷಣೆ ಮತ್ತು ಮೌಲ್ಯಮಾಪನದ ಭಾಗವಾಗಿ ಅಣೆಕಟ್ಟುಗಳಲ್ಲಿ ಅಳವಡಿಸಲಾಗಿರುವ ವಿವಿಧ ಉಪಕರಣಗಳು, ಅವುಗಳ ಸ್ಥಿತಿ ಮತ್ತು ಇತರೆ ತಾಂತ್ರಿಕ ಸಮಸ್ಯೆಗಳನ್ನ ಪತ್ತೆಹಚ್ಚಿ ಅಗತ್ಯ ಕ್ರಮ ಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ತುರ್ತು ಪರಿಸ್ಥಿತಿಗಳನ್ನ ಎದುರಿಸಲು EAP ಬಹು ಮುಖ್ಯ

ಅಣೆಕಟ್ಟುಗಳಿಗೆ ಸಂಬಂಧಿಸಿದ ತುರ್ತು ಪರಿಸ್ಥಿತಿಗಳನ್ನ ಪರಿಣಾಮಕಾರಿಯಾಗಿ ಎದುರಿಸಲು Emergency Action PLAN ಸಿದ್ಧಪಡಿಸಿ ಅನುಷ್ಠಾನಗೊಳಿಸುವುದು, ಅಗತ್ಯವಿರುವ ಕಡೆಗಳಲ್ಲಿ ತುರ್ತು ನಿರ್ವಹಣಾ ಕ್ರಮಗಳನ್ನು ಕೈಗೊಳ್ಳುವುದು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ನಡುವೆ ಸಮನ್ವಯ ಸಾಧಿಸುವ ಕುರಿತು ಸಭೆಯಲ್ಲಿ ಗಮನ ಹರಿಸಲಾಯಿತು.

ಅಲ್ಲದೆ, ಅಣೆಕಟ್ಟುಗಳ ತಾಂತ್ರಿಕ ಮಾರ್ಗದರ್ಶನ ಮತ್ತು ಸುರಕ್ಷತಾ ಕ್ರಮಗಳ ಕುರಿತು ಪರಿಶೀಲನೆ ನಡೆಸಲಾಯಿತು. ಅಣೆಕಟ್ಟುಗಳ ದುರಸ್ತಿ, ಪುನಶ್ಚೇತನ ಮತ್ತು ಸುರಕ್ಷತಾ ಸುಧಾರಣೆಗಳಿಗೆ ಸಂಬಂಧಿಸಿದ Dam Rehabilitation and Improvement Project – DRIP ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಪ್ರಗತಿಯ ಬಗ್ಗೆಯೂ ಸಚಿವರು ಮಾಹಿತಿ ಪಡೆದರು.

ರಾಜ್ಯದ ಅಣೆಕಟ್ಟುಗಳ ಸುರಕ್ಷತೆಯಲ್ಲಿ ಯಾವುದೇ ರೀತಿಯ ಲೋಪಕ್ಕೆ ಅವಕಾಶ ನೀಡದೆ, ನಿಯಮಿತ ತಾಂತ್ರಿಕ ಪರಿಶೀಲನೆ, ನಿರ್ವಹಣೆ ಹಾಗೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಕೈಗೊಳ್ಳುವಂತೆ ಸಚಿವ ಎನ್. ಚೆಲುವರಾಯಸ್ವಾಮಿ  ಅಧಿಕಾರಿಗಳಿಗೆ ಸೂಚಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments