Homeಕರ್ನಾಟಕಮೈಸೂರು ದಸರಾ ಚಿತ್ರಸಂತೆ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ.

ಮೈಸೂರು ದಸರಾ ಚಿತ್ರಸಂತೆ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ.

ಮೈಸೂರು ದಸರಾ ಚಿತ್ರಸಂತೆ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಯತೀಂದ್ರ ಸಿದ್ದರಾಮಯ್ಯ.

ಕಲೆಯ ವೈವಿಧ್ಯತೆ, ಕಲಾವಿದರ ಅಪಾರ ಸೃಜನಶೀಲತೆ ಹಾಗೂ ಸಾರ್ವಜನಿಕ ಚಿತ್ರಪ್ರೇಮಿಗಳ ಉತ್ಸಾಹದಿಂದಾಗಿ ಈ ಬಾರಿಯ ಚಿತ್ರಸಂತೆ ಅತ್ಯಂತ ಶೋಭಾಯಮಾನವಾಗಿ ಮೂಡಿಬಂದಿದೆ ಎಂದು ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಇಂದು ಅಧಿಕೃತವಾಗಿ ‘ದಸರಾ ಚಿತ್ರಸಂತೆ’ಯನ್ನು ಉದ್ಘಾಟಿಸಿ ಮಾತನಾಡಿದ ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಚಿತ್ರಸಂತೆಯೂ ಕೂಡ ಒಂದಾಗಿದೆ, ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸಲು ಸರ್ಕಾರ ಸದಾ ಬದ್ಧವಾಗಿದೆ ಎಂದು ತಿಳಿಸಿದರು.

ಉದ್ಘಾಟನೆಯ ಬಳಿಕ ಪ್ರದರ್ಶನದಲ್ಲಿದ್ದ ವಿವಿಧ ಕಲಾಕೃತಿಗಳನ್ನು ವೀಕ್ಷಿಸಿದ ಸಚಿವರು, ಕಲಾವಿದರು ಹಾಗೂ ಸಾರ್ವಜನಿಕರೊಂದಿಗೆ ಅತ್ಯಂತ ಆತ್ಮೀಯವಾಗಿ ಸಂವಾದ ನಡೆಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಹರೀಶ್ ಗೌಡ, ಶ್ರೀವತ್ಸ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಹಿರಿಯ ಮುಖಂಡರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments