Homeಕರ್ನಾಟಕಅರಣ್ಯ ನಿರ್ವಹಣೆ ಸಂಶೋಧನಾ ಕಿರುಹೊತ್ತಿಗೆ ಲೋಕಾರ್ಪಣೆ: ಸಚಿವ ರಾಮಲಿಂಗಾರೆಡ್ಡಿ

ಅರಣ್ಯ ನಿರ್ವಹಣೆ ಸಂಶೋಧನಾ ಕಿರುಹೊತ್ತಿಗೆ ಲೋಕಾರ್ಪಣೆ: ಸಚಿವ ರಾಮಲಿಂಗಾರೆಡ್ಡಿ

ರಾಜ್ಯದ ಅರಣ್ಯ ಸಂರಕ್ಷಣೆ, ಜೈವಿಕ ವೈವಿಧ್ಯತೆಯ ರಕ್ಷಣೆ ಹಾಗೂ ಅರಣ್ಯ ನಿರ್ವಹಣೆಯಲ್ಲಿ ವೈಜ್ಞಾನಿಕ ಸಂಶೋಧನೆಗಳಿಗೆ ಆದ್ಯತೆ ನೀಡುವ ಉದ್ದೇಶದಿಂದ ರೂಪಿಸಲಾದ “Bridging Gaps in Forest Management: Research Priorities Through 2035” ಕಿರುಹೊತ್ತಿಗೆಯನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕೃತವಾಗಿ ಲೋಕಾರ್ಪಣೆಗೊಳಿಸಿದರು.

ಭವಿಷ್ಯದಲ್ಲಿ ಎದುರಾಗಲಿರುವ ಪರಿಸರ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಹಾಗೂ ಅರಣ್ಯ ನಿರ್ವಹಣೆಯಲ್ಲಿ ನೂತನ ವೈಜ್ಞಾನಿಕ ಸಂಶೋಧನೆಗಳನ್ನು ಅಳವಡಿಸಿಕೊಳ್ಳಲು ಈ ಕಿರುಹೊತ್ತಿಗೆಯು ಮಾರ್ಗದರ್ಶಿಯಾಗಲಿದೆ. 2035ರ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ತಲುಪುವ ನಿಟ್ಟಿನಲ್ಲಿ ಅರಣ್ಯ ಇಲಾಖೆ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ತಜ್ಞರು ಉಪಸ್ಥಿತರಿದ್ದು, ಅರಣ್ಯ ಸಂರಕ್ಷಣೆ ಮತ್ತು ನಿರ್ವಹಣೆಗೆ ಸಂಬಂಧಿಸಿದ ಅಮೂಲ್ಯ ಸಲಹೆಗಳನ್ನು ಹಂಚಿಕೊಂಡರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments