Homeಕರ್ನಾಟಕಕೃಪ ಆಳ್ವಾ ಆರು ವರ್ಷ ಕಾಂಗ್ರೆಸ್‌ನಿಂದ ಉಚ್ಛಾಟನೆ:ಬಿ.ಕೆ. ಹರಿಪ್ರಸಾದ್

ಕೃಪ ಆಳ್ವಾ ಆರು ವರ್ಷ ಕಾಂಗ್ರೆಸ್‌ನಿಂದ ಉಚ್ಛಾಟನೆ:ಬಿ.ಕೆ. ಹರಿಪ್ರಸಾದ್

ಕೃಪ ಆಳ್ವಾ ಅವರನ್ನು ಕಾಂಗ್ರೆಸ್ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಿರುವುದು ಪಕ್ಷದ ಶಿಸ್ತು ಕ್ರಮದ ಭಾಗವಾಗಿದೆ. ಈ ಸಂಬಂಧ ಕಾರಣ ಕೇಳಿ ನೋಟಿಸ್ ನೀಡಲಾಗಿತ್ತು. ಆದರೆ ಅವರಿಂದ ಯಾವುದೇ ಉತ್ತರ ಬಾರದ ಹಿನ್ನೆಲೆಯಲ್ಲಿ ಉಚ್ಛಾಟನೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಕ್ಷೇತ್ರದಲ್ಲಿ ನಾಯಕರಿಗೆ ಮುಜುಗರ ಉಂಟುಮಾಡುವಂತಹ ಘಟನೆಗಳಿಂದ ಮಾಧ್ಯಮಗಳಲ್ಲಿ ಅಹಿತಕರ ಸುದ್ದಿಗಳು ಪ್ರಕಟವಾಗಿದ್ದವು. ಈ ಹಿನ್ನೆಲೆಯಲ್ಲಿ ಕೃಪ ಆಳ್ವಾ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿ, ಉತ್ತರಿಸಲು ಮೂರು ದಿನಗಳ ಕಾಲಾವಕಾಶ ನೀಡಲಾಗಿತ್ತು. ಆದರೆ ಉತ್ತರ ಬಾರದ ಕಾರಣ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಲಾಗಿದೆ ಎಂದರು.

ನೋಟಿಸ್ ತಲುಪಿಲ್ಲವೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಕಳುಹಿಸಿದ್ದ ನೋಟಿಸ್ ವಾಪಸ್ ಬಂದಿದೆ. ಹೀಗಾಗಿ ಬೇರೆ ವಿಧಿಯಿಲ್ಲದೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಕೃಪ ಆಳ್ವಾ ವಿದೇಶಕ್ಕೆ ತೆರಳಿರುವ ಕುರಿತು ಕೇಳಿದ ಪ್ರಶ್ನೆಗೆ, ಈ ವಿಚಾರವನ್ನು ಐಬಿ ಮತ್ತು ಸಿಬಿಐ ನೋಡಿಕೊಳ್ಳಲಿವೆ. ನಾನು ಅದರ ಬಗ್ಗೆ ಗಮನಹರಿಸುವುದಿಲ್ಲ ಎಂದು ಹೇಳಿದರು.

ಪಕ್ಷವು ತಡವಾಗಿ ಕ್ರಮ ಕೈಗೊಂಡಿರುವುದಕ್ಕೆ ಕಾರಣ ತಿಳಿಸಿದ ಅವರು, ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳದೆ, ಸಂಬಂಧಪಟ್ಟವರಿಗೆ ತಮ್ಮ ಅಭಿಪ್ರಾಯ ತಿಳಿಸಲು ಅವಕಾಶ ನೀಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯ. ಹೀಗಾಗಿ ಮೊದಲು ನೋಟಿಸ್ ನೀಡಿ ಉತ್ತರಿಸಲು ಅವಕಾಶ ಕಲ್ಪಿಸಲಾಗಿತ್ತು. ಉತ್ತರ ಬಾರದ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕೃಪ ಆಳ್ವಾ ಅವರ ಹಿಂದೆ ಬೇರೆ ಯಾರಾದರೂ ಇದ್ದಾರೆಯೇ ಎಂಬ ಬಗ್ಗೆ ಆಂತರಿಕ ತನಿಖೆ ನಡೆಸುವಿರಾ ಎಂಬ ಪ್ರಶ್ನೆಗೆ, ಈ ವಿಚಾರವನ್ನು ಮಹಾಮಾನವನಿಗೆ ಬಿಟ್ಟಿದ್ದೇವೆ. ಅವರ ವಿರುದ್ಧ ನೇರ ಸಾಕ್ಷ್ಯವಿರುವ ಕಾರಣ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದರು.

ನಾಗ್ಪುರದಲ್ಲಿ ಕಾಂಗ್ರೆಸ್ ಗೆಲುವಿನ ಕುರಿತು ವ್ಯಂಗ್ಯ

ನಾಗ್ಪುರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ಕುರಿತು ಮಾತನಾಡಿದ ಹರಿಪ್ರಸಾದ್, ನಾಗ್ಪುರ ಎಂದರೆ ಕನ್ನಡದಲ್ಲಿ ಹಾವಿನಪುರ. ದೇಶದಲ್ಲಿ ದ್ವೇಷದ ವಿಷ ಕಾರುವ ಸಂಘಟನೆಯ ಕತ್ತಿಗೆ ಕೈ ಹಾಕಿ ಹಿಡಿದಿದ್ದೇವೆ. ಅಲ್ಲಿಂದಲೇ ಆರಂಭವಾಗಿದ್ದು, ದೇಶಾದ್ಯಂತ ಅವರನ್ನು ಮಣಿಸುವ ಸಂದೇಶ ರವಾನಿಸುತ್ತೇವೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಸೋಲಿಸಿದ್ದೇವೆ ಎಂದು ಹೇಳಿಕೊಂಡು ಹೋದರೆ ಸಾಲದು. ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕ್ಷೇತ್ರದಲ್ಲಿ, ಬಿಹಾರದಲ್ಲಿ ಬಿಜೆಪಿ ಅಧ್ಯಕ್ಷರ ಕ್ಷೇತ್ರದಲ್ಲಿ, ನಿತಿನ್ ಗಡ್ಕರಿ ಅವರ ಕ್ಷೇತ್ರದಲ್ಲಿ ಹಾಗೂ ಯೋಗಿ ಆದಿತ್ಯನಾಥ್ ಅವರ ಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ ಎಂದು ಹೇಳಿದರು.

ಸರ್ಕಾರದ ಭವಿಷ್ಯದ ಬಗ್ಗೆ ವ್ಯಂಗ್ಯ

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಬಿ.ಎಸ್. ಯಡಿಯೂರಪ್ಪ ಭೇಟಿ ಮಾಡಿದ ಬಳಿಕ ರಾಜ್ಯ ಸರ್ಕಾರದ ಭವಿಷ್ಯದ ಕುರಿತು ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಹರಿಪ್ರಸಾದ್, ಆನೆ ನಡೆಯುವಾಗ ಏನಾದರೂ ಬೀಳಬಹುದು ಎಂದು ಅದರ ಹಿಂದೆ ತೋಳ ಮತ್ತು ನರಿ ನಡೆದುಕೊಂಡು ಹೋಗುತ್ತಿರುತ್ತವೆ. ಅದರಲ್ಲಿ ತಪ್ಪೇನಿಲ್ಲ ಎಂದು ವ್ಯಂಗ್ಯವಾಡಿದರು.

ದೆಹಲಿ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿ

ದೆಹಲಿ ಪ್ರತಿಭಟನೆ ಕುರಿತು ಮಾತನಾಡಿದ ಅವರು, ನಮ್ಮ ನಾಯಕ ರಾಹುಲ್ ಗಾಂಧಿ ಅವರು ಪ್ರಜಾಪ್ರಭುತ್ವ ಮತ್ತು ಸಂವಿಧಾನ ಉಳಿಸುವ ನಿಟ್ಟಿನಲ್ಲಿ ಹೋರಾಟಕ್ಕೆ ಕರೆ ನೀಡಿದ್ದಾರೆ. ಕರ್ನಾಟಕದಿಂದ ದೆಹಲಿಗೆ ತೆರಳಲು ರೈಲ್ವೆ ಅನುಮತಿ ನೀಡದ ಮೂಲಕ ಪ್ರತಿಭಟನೆಯಲ್ಲಿ ಭಾಗವಹಿಸಲು ತೊಂದರೆ ಉಂಟುಮಾಡಲಾಗಿದೆ ಎಂದು ಆರೋಪಿಸಿದರು.

ಆದರೂ ಕರ್ನಾಟಕದ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಈಗಾಗಲೇ ದೆಹಲಿ ತಲುಪಿದ್ದಾರೆ. ರಾಮಲೀಲಾ ಮೈದಾನದಲ್ಲಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಗಾಗಿ ಬೃಹತ್ ಹೋರಾಟ ನಡೆಯಲಿದೆ ಎಂದು ಬಿ.ಕೆ. ಹರಿಪ್ರಸಾದ್ ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments