Homeಕರ್ನಾಟಕದೆಹಲಿ | ಕೆ ಸಿ ವೇಣುಗೋಪಾಲ್ ಜೊತೆ ಸಿದ್ದರಾಮಯ್ಯ ಚರ್ಚೆ

ದೆಹಲಿ | ಕೆ ಸಿ ವೇಣುಗೋಪಾಲ್ ಜೊತೆ ಸಿದ್ದರಾಮಯ್ಯ ಚರ್ಚೆ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿಯಾಗಿ, ಸಮಾಲೋಚನೆ ನಡೆಸಿದರು.

ದೇಶಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ನವೆಂಬರ್ 1ರಂದು ನವದೆಹಲಿಯಲ್ಲಿ ನಡೆದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಈ ವಿಚಾರವಾಗಿ ಚರ್ಚೆ ನಡೆಸಿದ್ದರು.

ನಗರಾಭಿವೃದ್ಧಿ ಸಚಿವ ಡಾ‌.ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎ.ಎಸ್. ಪೊನ್ನಣ್ಣ, ಮಾಜಿ ಸಚಿವರಾದ ವೆಂಕಟೇಶ್, ವಿಧಾನ ಪರಿಷತ್ ಸದಸ್ಯರಾದ ನಾಗರಾಜ್ ಯಾದವ್, ಡಾ. ತಿಮ್ಮಯ್ಯ, ಶಿವಕುಮಾರ್, ಮಾಜಿ ಸದಸ್ಯ ರಮೇಶ್ ಬಾಬು, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮೆಹರೋಜ್ ಖಾನ್ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments