Homeದೇಶಅಸ್ಸಾಂನಲ್ಲಿ ಹಳಿತಪ್ಪಿದ ಪ್ಯಾಸೆಂಜರ್ ರೈಲು; ಹಲವರಿಗೆ ಗಾಯ

ಅಸ್ಸಾಂನಲ್ಲಿ ಹಳಿತಪ್ಪಿದ ಪ್ಯಾಸೆಂಜರ್ ರೈಲು; ಹಲವರಿಗೆ ಗಾಯ

ಅಸ್ಸಾಂನ ಕಮ್ರೂಪ್ ಜಿಲ್ಲೆಯಲ್ಲಿ ಬುಧವಾರ ಬೆಳಿಗ್ಗೆ ರೈಲು ಅಪಘಾತ ಸಂಭವಿಸಿದ್ದು, ಕೋಲ್ಕತ್ತಾ–ಸೈರಾಂಗ್ ಎಕ್ಸ್‌ಪ್ರೆಸ್‌ನ ಆರು ಬೋಗಿಗಳು ಹಳಿ ತಪ್ಪಿವೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಈವರೆಗೆ ಯಾವುದೇ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯ ದಿಗಾರು ರೈಲು ನಿಲ್ದಾಣದ ಸಮೀಪ ಬೆಳಿಗ್ಗೆ 6.54ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ರೈಲಿನ ಆರು ಬೋಗಿಗಳು ಹಳಿ ತಪ್ಪಿದ ಹಿನ್ನೆಲೆಯಲ್ಲಿ ಪ್ರಯಾಣಿಕರಲ್ಲಿ ಆತಂಕ ಉಂಟಾಗಿತ್ತು.

ಈ ಬಗ್ಗೆ ಮಾಹಿತಿ ನೀಡಿರುವ ಈಶಾನ್ಯ ರೈಲ್ವೆ ವಿಭಾಗದ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಕಪಿಂಜಲ್ ಕಿಶೋರ್ ಶರ್ಮಾ, ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಯಾಣಿಕರ ಸುರಕ್ಷತೆ ಹಾಗೂ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಮಿಜೋರಾಂನಿಂದ ಕೋಲ್ಕತ್ತದತ್ತ ತೆರಳುತ್ತಿದ್ದ ರೈಲಿನಲ್ಲಿ ಈ ಘಟನೆ ಸಂಭವಿಸಿದೆ. ಗಾಯಾಳುಗಳಿಗೆ ನೆರವು ನೀಡುವ ಹಾಗೂ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸುವ ಕಾರ್ಯಾಚರಣೆ ಮುಂದುವರಿದಿದೆ.

 

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments