ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಕ್ರಮ ಆಸ್ತಿಗಳಿಕೆ ಪ್ರಕರಣದ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ವಿರೋಧಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ (ಪಿಐಎಲ್ ) ಅರ್ಜಿ ಹೂಡಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಒಪ್ಪಿಗೆಯನ್ನು ಪಡೆಯಲು ರಾಜ್ಯ ಸರ್ಕಾರ ಆದೇಶ ಹಿನ್ನೆಲೆಯಲ್ಲಿ ಯತ್ನಾಳ್ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿದ್ದಾರೆ.
ಡಿಕೆ ಶಿವಕುಮಾರ್ ಅವರ ಮೇಲಿನ ಸಿಬಿಐ ತನಿಖೆಯನ್ನು ಹಿಂಪಡೆದ ರಾಜ್ಯ ಸರ್ಕಾರದ ಆದೇಶವನ್ನು ರದ್ದು ಪಡಿಸಲು ಮನವಿ ಮಾಡಿದ್ದಾರೆ ಎನ್ನಲಾಗುತ್ತಿದೆ.
ಅಲ್ಲದೆ ತನಿಖೆ ಮುಂದುವರಿಸಲು ಸಿಬಿಐಗೆ ನಿರ್ದೇಶಿಸಲು ಮನವಿ ಮಾಡಿದ್ದಾರೆ ಎನ್ನಲಾಗಿದ್ದು ಕಾಜಿ ಲೆಂಡಪ್ ದೋರ್ಜಿ ಪ್ರಕರಣದ ತೀರ್ಪು ಉಲ್ಲೇಖಿಸಿದ್ದಾರೆ. ಒಮ್ಮೆ ನೀಡಿದ್ದ ಒಪ್ಪಿಗೆ ಹಿಂಪಡೆಯುವಂತಿಲ್ಲ.
ಸಿಬಿಐ ತನಿಖೆಯು ಬಹುತೇಕ ಮುಕ್ತಾಯದ ಹಂತದಲ್ಲಿದೆ.ಈ ಹಂತದಲ್ಲಿ ರಾಜ್ಯ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದೆ. ಸಿಬಿಐ ತನಿಖೆಯನ್ನು ಮೋಟಕುಗೊಳಿಸುವ ಉದ್ದೇಶ ಹೊಂದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ನವರಿಂದ ಪಿಐಎಲ್ ಅರ್ಜಿ ಸಲ್ಲಿಕೆಯಾಗಿದೆ ಎಂದು ತಿಳಿದುಬಂದಿದೆ.