Homeಕರ್ನಾಟಕಎರಡು ವರ್ಷದೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಗೃಹ ಸಚಿವ ಡಾ. ಜಿ ಪರಮೇಶ್ವರ

ಎರಡು ವರ್ಷದೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಗೃಹ ಸಚಿವ ಡಾ. ಜಿ ಪರಮೇಶ್ವರ

ಬೆಂಗಳೂರು: ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆಯ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ ಹೇಳಿದರು.

ಸೋಮವಾರ ಬೆಳಿಗ್ಗೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಎತ್ತಿನ ಹೊಳೆ ಯೋಜನೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

“ಎತ್ತಿನ ಹೊಳೆ ಯೋಜನೆಯು ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುಧಾನವನ್ನು ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ನಮ್ಮ ಸರ್ಕಾರವು ಅನುದಾನ ಬಿಡಗುಡೆ ಮಾಡಲಾಗಿದೆ. ಯೋಜನೆಯ ಅಂದಾಜು ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ 22 ಸಾವಿರ ಕೋಟಿ ರೂ. ಆಗುತ್ತಿದೆ. ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು” ಎಂದು ತಿಳಿಸಿದರು.

“ವಾಟರ್ ಸ್ಟೋರೆಜ್‌ಗಾಗಿ ಕೊರಟಗೆರೆ ರೈತರು ನೀಡಿರುವ ಭೂಮಿಗೆ ಎಕರೆಗೆ 8 ಲಕ್ಷ ರೂ. ಹಾಗೂ ದೊಡ್ಡಬಳ್ಳಾಪುರದಲ್ಲಿ ಎಕರೆ ಭೂಮಿಗೆ 32 ಲಕ್ಷ ರೂ. ಪರಿಹಾರ ನಿಗಧಿಪಡಿಸಲಾಗಿದೆ. ಎಲ್ಲ ರೈತರಿಗೂ ಒಂದೇ ರೀತಿಯ ಸಮಾನ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗಿದೆ” ಎಂದರು.

ಎನ್‌ಐಎ ದಾಳಿ

“ಎನ್‌ಐಎ ಕಚೇರಿ ಬೆಂಗಳೂರಿನಲ್ಲಿ ಆಗಿದೆ. ಅಕ್ರಮ ಚಟುವಟಿಕೆಗಳ‌ ಬಗ್ಗೆ ಮಾಹಿತಿ ಆಧರಿಸಿ ದಾಳಿ ಮಾಡುತ್ತಿರುತ್ತಾರೆ. ಈ ಬಗ್ಗೆ ಎನ್‌ಐಎ ತಂಡವು ಕೆಲವು ಸಲ ರಾಜ್ಯ ಪೊಲೀಸರೊಂದಿಗೆ ಮಾಹಿತಿ ಹಂಚಿಕೊಳ್ಳುತ್ತಾರೆ. ಅವರ ಕರ್ತವ್ಯ ಅವರು ಮಾಡಲಿದ್ದಾರೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments