Homeಕರ್ನಾಟಕಮೋದಿ ಪ್ರತಿ ವಿದೇಶಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ; ಇದು ಮೋಜಾ?: ಸಿದ್ದರಾಮಯ್ಯ

ಮೋದಿ ಪ್ರತಿ ವಿದೇಶಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ; ಇದು ಮೋಜಾ?: ಸಿದ್ದರಾಮಯ್ಯ

ಹಸಿವಿನ ಸೂಚ್ಯಂಕದಲ್ಲಿ ಭಾರತ 111ನೇ ಸ್ಥಾನದಲ್ಲಿದೆ. ದೇಶದ ಜನ ಹಸಿವಿನಿಂದ ಬಳಲುತ್ತಿರುವ ವೇಳೆ ಪ್ರಧಾನಿಗಳು ವಿಶೇಷ ವಿಮಾನದ ಮೂಲಕ ವಿದೇಶ ಯಾತ್ರೆ ಮಾಡಿಕೊಂಡು, ಮೋಜು ಮಾಡುತ್ತಾರೆಂದು ಹೇಳಲು ಬರುತ್ತದೆಯಾ? ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.

ಜಮೀರ್‌ ಅಹಮದ್‌ ಖಾನ್‌ ಜೊತೆಗಿನ ವಿಮಾನ ಪ್ರಯಾಣ ವಿಚಾರವಾಗಿ ಟೀಕಿಸಿರುವ ಬಿಜೆಪಿಗೆ ಸಾಮಾಜಿಕ ಜಾಲತಾಣದಲ್ಲೇ ತಿರುಗೇಟು ನೀಡಿರುವ ಅವರು, “ರಾಜ್ಯದ ಬರ ಪರಿಸ್ಥಿತಿ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಚರ್ಚಿಸುವ ಸಲುವಾಗಿ ವಿಶೇಷ ವಿಮಾನದಲ್ಲಿ ನಾನು ಪ್ರಯಾಣ ಬೆಳೆಸಿದ್ದನ್ನು ವಿರೋಧಿಸುವ ನೈತಿಕತೆ ರಾಜ್ಯ ಬಿಜೆಪಿ ನಾಯಕರಿಗೆ ಇದೆಯೇ” ಎಂದು ಪ್ರಶ್ನಿಸಿದ್ದಾರೆ.

“ಆಪರೇಷನ್ ಕಮಲದ ಮೂಲಕ ಸಮ್ಮಿಶ್ರ ಸರ್ಕಾರ ಬೀಳಿಸಿ, ಶಾಸಕರನ್ನು ವಿಶೇಷ ವಿಮಾನದಲ್ಲಿ ದೆಹಲಿ, ಮುಂಬೈ ಸುತ್ತಾಡಿಸಿದ, ಐಷಾರಾಮಿ ಹೋಟೆಲ್‌ಗಳಲ್ಲಿ ವಾರಗಟ್ಟಲೆ ಠಿಕಾಣಿ ಹಾಕಿಸಿ ಮೋಜು ಮಸ್ತಿಗಾಗಿ ಖರ್ಚು ಮಾಡಿದ ನೂರಾರು ಕೋಟಿ ಹಣ ಬಿಜೆಪಿಯವರು ನರೇಗಾ ಯೋಜನೆಯಲ್ಲಿ ಕೂಲಿ ಮಾಡಿ ಕೂಡಿಟ್ಟದ್ದಲ್ಲ, ರಾಜ್ಯದ ಬಡಜನರು ಕಷ್ಟಪಟ್ಟು ಕಟ್ಟಿದ ತೆರಿಗೆ ಹಣ” ಎಂದು ಹರಿಹಾಯ್ದಿದ್ದಾರೆ.

“2014ರ ಜೂನ್ 15ರಿಂದ 2023ರ ಸೆಪ್ಟೆಂಬರ್‍‌ವರೆಗೆ ಪ್ರಧಾನಿ ನರೇಂದ್ರ ಮೋದಿ ಅವರು 74 ಬಾರಿ ವಿದೇಶಿ ಪ್ರವಾಸ ಮಾಡಿದ್ದಾರೆ. ಪ್ರಧಾನಿಗಳ ಅಧಿಕೃತ ತಾಣದ ಅಂಕಿ ಅಂಶಗಳ ಪ್ರಕಾರ ಪ್ರತಿ ಪ್ರವಾಸದ ಸರಾಸರಿ ವೆಚ್ಚ 8.9 ಕೋಟಿ ರೂಪಾಯಿ” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments