Homeಕರ್ನಾಟಕಸ್ಟಾರ್ಟ್ ಅಪ್‌ಗಳಿಗೆ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ: ಪ್ರಿಯಾಂಕ್‌ ಖರ್ಗೆ

ಸ್ಟಾರ್ಟ್ ಅಪ್‌ಗಳಿಗೆ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ: ಪ್ರಿಯಾಂಕ್‌ ಖರ್ಗೆ

“ನಿರೀಕ್ಷೆಗೂ ಮೀರಿದ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸ್ಟಾರ್ಟ್ ಅಪ್ ಗಳಿಗೆ ಧನಸಹಾಯಕ್ಕಾಗಿ ಅರ್ಜಿ ಸಲ್ಲಿಸಲು ಕೊನೆ ದಿನವನ್ನು 2024ರ ಫೆಬ್ರವರಿ 1ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಗಳ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಈ ಹಿಂದೆ 2023ರ ಡಿಸೆಂಬರ್ 23ರವರೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಹೊಸ ಹೊಸ ಸ್ಟಾರ್ಟ್ಅಪ್‌ಗಳಿಂದ ವಿನೂತನ ಚಿಂತನೆಯನ್ನು ಹೊರತಂದು ಅದನ್ನು ಪೋಷಿಸುವ ಜೊತೆಗೆ ವಿವಿಧ ಹಂತಗಳಲ್ಲಿ ಹಣಕಾಸಿನ ನೆರವು ನೀಡುವ ಉದ್ದೇಶದಿಂದ “Idea2PoC-ಎಲಿವೇಟೆಡ್” (ಗ್ರಾಂಟ್-ಇನ್-ಏಡ್) ಯೋಜನೆಯನ್ನು ಎಲೆಕ್ಟ್ರಾನಿಕ್ಸ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು ಜಾರಿಗೆ ತಂದಿತ್ತು.

ಮಾರುಕಟ್ಟೆ ಅಭಿವೃದ್ಧಿ ಮತ್ತು ಸ್ಕೇಲ್-ಅಪ್ ಅಭಿವೃದ್ಧಿಪಡಿಸಲು ಆರಂಭಿಕ ಹಂತದ ಹಣಕಾಸಿನ ಅವಶ್ಯಕತೆ ಸ್ಟಾರ್ಟ್ಅಪ್ಗಳಿಗೆ ಬೇಕಾಗಲಿದ್ದು, ಇದಕ್ಕಾಗಿ 50 ಲಕ್ಷಗಳವರೆಗೆ ಅನುದಾನ ನೀಡುವುದು ಈ ಯೋಜನೆಯ ಉದ್ದೇಶಿಸಿದೆ.

ಪ್ರಮುಖವಾಗಿ ಮಾರ್ಗದರ್ಶಕರು, ನೆಟ್ವರ್ಕಿಂಗ್ ಅವಕಾಶಗಳು, ಇನ್ಕ್ಯುಬೇಶನ್ ಸೌಲಭ್ಯಗಳು ಇತ್ಯಾದಿ ಸೇರಿದಂತೆ ಹಲವು ಕ್ಷೇತ್ರಗಳ ಸ್ಟಾರ್ಟ್ಅಪ್ಗಳಿಗೆ ಸಮಗ್ರ ಉದ್ಯಮಶೀಲತಾ ವೇದಿಕೆಯನ್ನು ಒದಗಿಸುವುದು ಈ ಯೋಜನೆಯ ಗುರಿಯಾಗಿದೆ.

‘Idea2PoC-ಎಲಿವೇಟೆಡ್’ ಯೋಜನೆಯು ವಿಭಿನ್ನ ಅನ್ವೇಷಣೆಗಳೊಂದಿಗೆ ಮುಂದೆ ಬರುವ ಉದಯೋನ್ಮುಖ ಸ್ಟಾರ್ಟ್ಅಪ್ಗಳಿಗೆ ಹಣಕಾಸಿನ ನೆರವು ನೀಡುವುದಾಗಿದೆ. ಈ ಯೋಜನೆಗೆ ಸ್ಟಾರ್ಟ್ಅಪ್ಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸ್ಟಾರ್ಟ್ಅಪ್ಗಳು ತಮ್ಮ ಅರ್ಜಿ ಸಲ್ಲಿಸಲು ಇನ್ನಷ್ಟು ದಿನಗಳ ಕಾಲಾವಕಾಶ ಬೇಕೆಂಬುದನ್ನು ಮನಗಂಡು ಅರ್ಜಿ ಸಲ್ಲಿಕೆಯ ಕೊನೆಯ ದಿನವನ್ನು ಮುಂದೂಡಿ, ಇನ್ನಷ್ಟು ದಿನಗಳ ಕಾಲಾವಕಾಶ ನೀಡಲಾಗಿದೆ, ಈ ಮೂಲಕ ಮತ್ತಷ್ಟು ಸ್ಟಾರ್ಟ್ಅಪ್ಗಳು ಅರ್ಜಿ ಸಲ್ಲಿಸಲು ಅವಕಾಶ ನೀಡುವುದು ಇಲಾಖೆಯ ಉದ್ದೇಶವಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಕಟಣೆಯಲ್ಲಿ ಹೇಳಿದ್ದಾರೆ.

ವಿವಿಧ ಕ್ಷೇತ್ರಗಳಿಗೆ ಸಂಬಂಧಿಸಿದ ಸ್ಟಾರ್ಟ್ಅಪ್ಗಳು ತಮ್ಮ ವಿಶಿಷ್ಟ ಹಾಗ ವಿನೂತನ ಚಿಂತನೆಗಳಿಗೆ ಹಣಕಾಸು ಹೊಂದಿಸಿಕೊಳ್ಳಲು ಸರ್ಕಾರದ ಈ ಯೋಜನೆಯ ಪ್ರಯೋಜನ ಪಡೆದುಕೊಳ್ಳಬಹುದಾಗಿದೆಯಲ್ಲದೆ, ಕಾಲಾವಕಾಶ ಹೆಚ್ಚಿಸಿರುವುದರಿಂದ ಮತ್ತಷ್ಟು ಅನುಕೂಲವಾಗಲಿದೆ ಎಂದು ಸಚಿವ ಖರ್ಗೆ ತಿಳಿಸಿದ್ದು ಈ ವಿಸ್ತರಣೆಯು ಹೆಚ್ಚಿನ ಸ್ಟಾರ್ಟ್ಅಪ್ಗಳಿಗೆ ಭಾಗವಹಿಸಲು ಅವಕಾಶ ನೀಡುವುದು ಎಂದಿದ್ದಾರೆ.

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ನಿಗದಿಯಾಗಿದ್ದ ಗಡುವು: ಡಿಸೆಂಬರ್ 23, 2023; ಸಂಜೆ 5 ಗಂಟೆ.
ಅರ್ಜಿ ಸಲ್ಲಿಸಲು ವಿಸ್ತರಿಸಲಾಗಿರುವ ಗಡುವು: ಜನವರಿ 1, 2024; ಸಂಜೆ 5 ಗಂಟೆ

ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿಗಳನ್ನು ಸಲ್ಲಿಸಲು, ಭೇಟಿ ನೀಡಿ: ಸ್ಟಾರ್ಟ್ಅಪ್ ಕರ್ನಾಟಕ (missionstartupkarnataka.org)

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments