ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರಿದ್ದ ಕಾರು ಅಪಘಾತಕ್ಕೀಡಾದ ಘಟನೆ ತುಮಕೂರು ಜಿಲ್ಲೆಯ ನಂದಿಹಳ್ಳಿ ಬಳಿ ಬುಧವಾರ ಮಧ್ಯರಾತ್ರಿ ನಡೆದಿದೆ.
ಅದೃಷ್ಟವಶಾತ್ ಮಧು ಬಂಗಾರಪ್ಪ ಸೇರಿ ಕಾರಿನಲ್ಲಿದ್ದ ಮೂವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗದಿಂದ ಬೆಂಗಳೂರಿಗೆ ಸಚಿವರು ಪ್ರಯಾಣಿಸಿಸುತ್ತಿದ್ದರು. ಈ ವೇಳೆ ನಂದಿಹಳ್ಳಿ ಸಮೀಪ ರಾಜಸ್ಥಾನದ ಲಾರಿ ಮತ್ತು ಸಚಿವರ ಕಾರು ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರಿನ ಮುಂದಿನ ಭಾಗ ಜಖಂಗೊಂಡಿದೆ.
ಸಚಿವರು ಬಳಿಕ ಬದಲಿ ಕಾರು ವ್ಯವಸ್ಥೆ ಮಾಡಿಕೊಂಡು ಬೆಂಗಳೂರಿಗೆ ಪ್ರಯಾಣಿಸಿದರು. ಕ್ಯಾತಸಂದ್ರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಕಾರು ಮತ್ತು ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಇದಕ್ಕೆ ಸಂಬಂಧಿಸಿ ಸಚಿವ ಮಧು ಬಂಗಾರಪ್ಪ ಅವರು ಯಾವುದೇ ಹೇಳಿಕೆ ನೀಡಿಲ್ಲ.