2023-24 ನೇ ಶೈಕ್ಷಣಿಕ ಸಾಲಿನಲ್ಲಿ ಕಾಲೇಜು ಮತ್ತು ಯೂನಿವರ್ಸಿಟಿಗಳಲ್ಲಿ ಕನಿಷ್ಠ ಶೇ.10 ರಷ್ಟು ಶುಲ್ಕ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ.
ವಿಶ್ವವಿದ್ಯಾಲಯಗಳ ಆದಾಯ ಕೊರತೆಯ ಕಾರಣ ನೀಡಿ ಪ್ರಸಕ್ತ ವರ್ಷದಲ್ಲಿ ಶೇ.10 ರಷ್ಟು ಶುಲ್ಕ ಏರಿಕೆ ಮಾಡಲು ಉನ್ನತ್ತ ಶಿಕ್ಷಣ ಇಲಾಖೆ ಅವಕಾಶ ನೀಡಿದೆ ಎನ್ನಲಾಗಿದೆ.
ಒಂದು ಕಡೆ ಯುವನಿಧಿ ಜಾರಿ ಮಾಡುವ ಮೂಲಕ ವಿದ್ಯಾರ್ಥಿಗಳ ನೆರವಿಗೆ ಬಂದ ಸರ್ಕಾರ, ಇನ್ನೊಂದು ಕಡೆ ಪದವಿ ವಿದ್ಯಾರ್ಥಿಗಳಿಗೆ ಶುಲ್ಕ ಏರಿಕೆ ಮೂಲಕ ಬಿಗ್ ಶಾಕ್ ನೀಡಿದಂತಾಗಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಪದವಿ ಕೋರ್ಸ್ಗಳ ಶುಲ್ಕ ಶೇ.10 ಏರಿಕೆ ಮಾಡಲು ಶಿಕ್ಷಣ ಸಂಸ್ಥೆಗಳಿಗೆ ಉನ್ನತ್ತ ಶಿಕ್ಷಣ ಇಲಾಖೆ ಅವಕಾಶ ಕೊಟ್ಟಿದ್ದು, ಬಿಎ, ಬಿಕಾಂ, ಬಿಎಸ್ಸಿ ಸೇರಿದಂತೆ ಅನೇಕ ಪದವಿ ಪ್ರವೇಶಕ್ಕೆ ಕಳೆದ ವರ್ಷ ಇದ್ದ ಶುಲ್ಕಕ್ಕೆ ಶೇ.10ರಷ್ಟು ಏರಿಕೆಗೆ ಅವಕಾಶ ನೀಡಿದೆ. ಇದು ಸಹಜವಾಗಿಯೇ ಬಡ ವಿದ್ಯಾರ್ಥಿಗಳ ಮೇಲೆ ಆರ್ಥಿಕ ಹೊರೆ ಹೆಚ್ಚಿಸಿದೆ.
ಈಗಾಗಲೇ ಪರಿಷ್ಕೃತ ಶುಲ್ಕ ಪಟ್ಟಿಯನ್ನು ಯೂನಿವರ್ಸಿಟಿಗಳಿಗೆ ನೀಡಿ ಈ ಬಗ್ಗೆ ಸಿದ್ಧತೆಗೆ ಸರ್ಕಾರ ಸೂಚಿಸಿದೆ. ಮುಂದಿನ ವರ್ಷ ಪದವಿ ವಿದ್ಯಾರ್ಥಿಗಳಿಗೆ ಮತಷ್ಟು ಶುಲ್ಕ ಏರಿಕೆಯ ಬರೆ ಬೀಳಲಿದೆ.
ಪಂಚ ಗ್ಯಾರಂಟಿಗಳು ಜಾರಿಯಾದ ಮೇಲೆ ಹಣ ಸಂಗ್ರಹಿಸಲು ಈಗಾಗಲೇ ತರಿಗೆ ಏರಿಕೆಯಾಗಿದೆ. ಮದ್ಯದ ಬೆಲೆ ಏರಿಕೆ ಕಂಡಿದೆ. ಈಗ ಕಾಲೇಜು ಶುಲ್ಕ ಏರಿಕೆಗೆ ಸರ್ಕಾರ ಅವಕಾಶ ನೀಡಿದೆ.