Homeಕರ್ನಾಟಕಹಿಂದುತ್ವ ಹೆಸರಲ್ಲಿ ಬಿಜೆಪಿಯವರು ಅಪರಾಧಿಗಳನ್ನು ಬೆಂಬಲಿಸುತ್ತಾರೆ: ಪರಮೇಶ್ವರ್ ತಿರುಗೇಟು

ಹಿಂದುತ್ವ ಹೆಸರಲ್ಲಿ ಬಿಜೆಪಿಯವರು ಅಪರಾಧಿಗಳನ್ನು ಬೆಂಬಲಿಸುತ್ತಾರೆ: ಪರಮೇಶ್ವರ್ ತಿರುಗೇಟು

ನಮ್ಮ ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಿರುವ ಜನರಲ್ಲಿ ಹೆಚ್ಚಿನ ಅಂಶ ಹಿಂದೂಗಳೇ ಇದ್ದಾರೆ. ನಾವು ಹೇಗೆ ಹಿಂದೂ ವಿರೋಧಿ ಆಗುತ್ತೇವೆ? ಸುಮ್ಮನೇ ಬಿಜೆಪಿ ನಾಯಕರು ಬಾಯಿಗೆ ಬಂದಂಗೆ ಮಾತನಾಡುತ್ತಾರೆ ಎಂದು ಗೃಹಸಚಿವ ಡಾ.ಜಿ. ಪರಮೇಶ್ವರ್ ತಿರುಗೇಟು ನೀಡಿದರು.

ಕಾಂಗ್ರೆಸ್ ಸರ್ಕಾರ ಹಿಂದೂಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿ, ಏನೇ ಆರೋಪ ಮಾಡುವುದಕ್ಕೂ ಒಂದು ಮಿತಿ ಇರಬೇಕು. ಇಂತಹ ವಿಷಯಗಳಲ್ಲಿ ನಾವು ನ್ಯಾಯವಾಗಿ ಹೋಗಲು ಪ್ರಯತ್ನ ಮಾಡುತ್ತಿದ್ದೇವೆ” ಎಂದರು.

ದತ್ತಪೀಠ ಹೋರಾಟಗಾರರ ವಿರುದ್ಧದ ಪ್ರಕರಣ ವಿಚಾರವಾಗಿ ಪ್ರತಿಕ್ರಿಯಿಸಿ, “ನಾನು ಕೇಸ್ ರೀ ಓಪನ್ ಮಾಡಿಲ್ಲ. ಪೊಲೀಸ್ ಠಾಣೆಯಲ್ಲಿ ಇರುವ ಪ್ರಕರಣಗಳ ವಿರುದ್ಧ ಅಧಿಕಾರಿ ಕ್ರಮ ತೆಗೆದುಕೊಳ್ಳಲು ಹೋದರೆ ರೀ ಓಪನ್ ಮಾಡಿದ್ದೀರಾ ಅಂತ ಕೇಳಿದರೆ ಹೇಗೆ? ಕೋರ್ಟ್ ಸೂಚನೆ ಕೊಟ್ಟಿದ್ದರೆ ನಾವು ಕೇಳಬಾರದಾ? ಬಿಜೆಪಿಯವರು ಕೋರ್ಟ್, ಕಾನೂನಿಗೂ ಬೆಲೆ ಕೊಡುವುದಿಲ್ಲ” ಎಂದು ಹರಿಹಾಯ್ದರು.

ಶ್ರೀಕಾಂತ್‌ ಪೂಜಾರಿ ಬಂಧನ ಬಗ್ಗೆ ಮಾತನಾಡಿ, “16 ಪ್ರಕರಣಗಳಲ್ಲಿ ಭಾಗಿಯಾಗಿರುವ ವ್ಯಕ್ತಿಯ ವಿಷಯಕ್ಕೆ ಇಷ್ಟು ದೊಡ್ಡದು ಮಾಡಿ ಇಡೀ ದೇಶದಲ್ಲಿ ದೊಡ್ಡದು ಮಾಡಲು ಹೊರಟಿದ್ದಾರೆ ಬಿಜೆಪಿಯವರು. ಇದರ ಅರ್ಥ ಹಿಂದುತ್ವ ವಿಚಾರ ಮುಂದಿಟ್ಟುಕೊಂಡು ಬಿಜೆಪಿಯವರು ಅಪರಾಧಿಗಳನ್ನು ಬೆಂಬಲಿಸುತ್ತಿದ್ದಾರೆ. ಒಂಬತ್ತು ಸಾರಾಯಿ ಕೇಸ್ ಸೇರಿದಂತೆ ಬೇರೆ ಬೇರೆ ಪ್ರಕರಣಗಳು ಆತನ ಮೇಲಿದೆ. ಅ ಲೀಸ್ಟ್​ನಲ್ಲಿ ಬೇರೆ ಹಿಂದೂಗಳು ಇದ್ದಾರೆ ಅಲ್ಲವಾ? ಎಂದು ಕಿಡಿಕಾರಿದರು.

“ಚುನಾವಣೆ ಮೊದಲು ಚಿತ್ರದುರ್ಗದಲ್ಲಿ ಎಸ್​ಸಿ ಎಸ್​ಟಿ ಸಮಾವೇಶ ಮಾಡಿ 10 ನಿರ್ಣಯ ತೆಗೆದುಕೊಂಡಿದ್ದೆವು. ಸರ್ಕಾರ ಬಂದಾಗ ಅದನ್ನ ಮಾಡುತ್ತೇವೆ ಅಂತ ಘೋಷಣೆ ಮಾಡಿದ್ದೆವು. ಈಗ ಸರ್ಕಾರ ಬಂದಿದೆ. ಅದನ್ನ ಜಾರಿ ಮಾಡಬೇಕು. ಅ ಬಗ್ಗೆಯೂ ಚರ್ಚೆ ಮಾಡುತ್ತಿದ್ದೇವೆ” ಎಂದರು.

“ಸತೀಶ್ ಜಾರಕಿಹೊಳಿ ನಿವಾಸದಲ್ಲಿ ರಾಜಕೀಯ ಚರ್ಚೆ ವಿಚಾರವಾಗಿ ಮಾತನಾಡಿ, “ಡಿನ್ನರ್ ಮೀಟಿಂಗ್ ಇತ್ತು, ಊಟ ಮಾಡಿ ಬಂದೆ. ರಾಜಕೀಯ ಬಗ್ಗೆಯೂ ಚರ್ಚೆ ಆಗಿದೆ. ಅದನ್ನು ಬಹಿರಂಗಪಡಿಸಲು ಆಗುತ್ತಾ? ನಾವು ರಾಜಕಾರಣಿಗಳು, ರಾಜಕೀಯ ಬಗ್ಗೆ ಮಾತಾಡಿಯೇ ಇರುತ್ತೇವೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments