Homeಕರ್ನಾಟಕಬೆಂಗಳೂರು ಟ್ರಾಫಿಕ್ ಸಮಸ್ಯೆ; ಸುರಕ್ಷಿತ ಸಂಚಾರಕ್ಕೆ ತಂತ್ರಜ್ಞಾನ ಬಳಕೆ: ಡಾ. ಜಿ.ಪರಮೇಶ್ವರ್

ಬೆಂಗಳೂರು ಟ್ರಾಫಿಕ್ ಸಮಸ್ಯೆ; ಸುರಕ್ಷಿತ ಸಂಚಾರಕ್ಕೆ ತಂತ್ರಜ್ಞಾನ ಬಳಕೆ: ಡಾ. ಜಿ.ಪರಮೇಶ್ವರ್

‌ಬೆಂಗಳೂರು ನಗರದಲ್ಲಿ ಟ್ರಾಫಿಕ್ ಸಮಸ್ಯೆಯ ನಿಯಂತ್ರಣಕ್ಕೆ ಅಂತಾರಾಷ್ಟ್ರೀಯ ಮಟ್ಟದ ಅಗತ್ಯ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ‘ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2024’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ” ದೇಶದಲ್ಲಿನ ಪ್ರಮುಖ ನಗರಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ತೀರ ಕಡಿಮೆಯಾಗಿದೆ. ಕಮಾಂಡ್ ಸೆಂಟರ್‌ನಲ್ಲಿನ ಅತ್ಯಾಧುನಿಕ ತಂತ್ರಜ್ಞಾನದ‌ ಮೂಲಕ ನಗರದಲ್ಲಿನ ಟ್ರಾಫಿಕ್ ಸಮಸ್ಯೆ ನಿಯಂತ್ರಿಸಲಾಗುತ್ತಿದೆ. ಜನರು ಮತ್ತಷ್ಟು ಸುರಕ್ಷಿತವಾಗಿ ಸಂಚರಿಸುವ ದೃಷ್ಟಿಯಿಂದ ತಂತ್ರಜ್ಞಾನ ಬಳಸಲಾಗುವುದು” ಎಂದರು.

“ವಾಹನ ಚಾಲನೆ ವೇಳೆ ನಮ್ಮ ಸುರಕ್ಷತೆಯ ಜೊತೆಗೆ ಬೇರೆಯವರ ಪ್ರಾಣ ರಕ್ಷಣೆಯ ಹೊಣೆ ನಮ್ಮ ಮೇಲಿದೆ. ಟ್ರಾಫಿಕ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಇದರಿಂದ ಅನಾಹುತಗಳನ್ನು ತಪ್ಪಿಸಬಹುದು” ಎಂದು ತಿಳಿಸಿದರು.

“ಬೆಂಗಳೂರಿನಲ್ಲಿ 1 ಕೋಟಿಗೂ ಹೆಚ್ಚು ವಾಹನಗಳಿವೆ. 2023ರಲ್ಲಿ 900 ಜನ ರಸ್ತೆ ಅಪಘಾತದಲ್ಲಿ ಪ್ರಾಣ‌ ಕಳೆದುಕೊಂಡಿದ್ದಾರೆ. ಇದನ್ನು ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸಾಮಾಜಿಕ ಜಾಲತಾಣದ ಮೂಲಕ ಕಾಲೇಜು ವಿದ್ಯಾರ್ಥಿಗಳಿಗೆ, ಜನರಿಗೆ ಟ್ರಾಫಿಕ್ ನಿಯಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ” ಎಂದು ಹೇಳಿದರು.

“ದೇಶದಲ್ಲೇ ಮೊದಲ ಬಾರಿಗೆ ಆರ್ಟಿಫಿಶಿಯಲ್ ಇಂಟಲಿಜೆನ್ಸ್ (ಕೃತಕ ಬುದ್ಧಿಮತ್ತೆ) ಬಳಕೆ ಮೂಲಕ ಟ್ರಾಫಿಕ್ ನಿಯಂತ್ರಿಸುವ “ಬೆಂಗಳೂರು ಟ್ರಾಫಿಕ್ ಇಂಜಿನ್”ಗೆ ಚಾಲನೆ ನೀಡಲಾಯಿತು. ಈ ತಂತ್ರಜ್ಞಾನವು ತುರ್ತುಸೇವೆ ವಾಹನಗಳ ಸಂಚಾರಕ್ಕೆ ಹೆಚ್ಚು ಅನುಕೂಲವಾಗಲಿದೆ” ಎಂದರು.‌

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments