Homeಕರ್ನಾಟಕಸಚಿವ ಭೋಸರಾಜು ಮನವಿ; ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವಂತೆ ವಿತ್ತ ಸಚಿವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಸಚಿವ ಭೋಸರಾಜು ಮನವಿ; ರಾಯಚೂರಿಗೆ ಏಮ್ಸ್‌ ಮಂಜೂರು ಮಾಡುವಂತೆ ವಿತ್ತ ಸಚಿವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಸಚಿವ ಎನ್ ಎಸ್ ಭೋಸರಾಜು ಅವರ ಮನವಿಯಂತೆ 2024-25 ನೇ ಸಾಲಿನ ಕೇಂದ್ರ ಆಯ-ವ್ಯಯದಲ್ಲಿ ರಾಯಚೂರಿಗೆ ಏಮ್ಸ್ (AIIMS)ಮಂಜೂರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

ಜನವರಿ 25ರಂದು ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸರಾಜು ಅವರು, ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿಯನ್ನು ಮಾಡಿಕೊಂಡಿದ್ದರು.
ರಾಯಚೂರು ನಗರದಲ್ಲಿ ALL INDIA INSTITUTE OF MEDICAL SCIENCE (AIIMS) ಸ್ಥಾಪನೆ ಮಾಡಲು ಜಿಲ್ಲೆಯ ಜನರ ಮನವಿಯ ಮೇರೆಗೆ ಈಗಾಗಲೇ ನಮ್ಮ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಲಾಗಿದೆ. ರಾಯಚೂರು ನಗರದಲ್ಲಿ ವಿವಿಧ ಸಂಘ ಸಂಸ್ಥೆಗಳಿಂದ ಹಾಗೂ ಹೋರಾಟ ಸಮಿತಿಯಿಂದ ಕಳೆದ 625 ದಿನಗಳಿಂದ ಸರದಿ ಸತ್ಯಾಗ್ರಾಹ ಮುಂದುವರೆದಿದೆ.

ರಾಯಚೂರು ಜಿಲ್ಲೆಯನ್ನು ಕೇಂದ್ರ ಸರಕಾರವು ಮಹತ್ವಾಕಾಂಕ್ಷೆ ಜಿಲ್ಲೆಯೆಂದು (Aspiration District) ಘೋಷಣೆ ಮಾಡಿದೆ. ಹಾಗೂ ಸಂವಿಧಾನದ 371 (ಜೆ) ವಿಧಿಯ ಅನ್ವಯ ವಿಶೇಷ ಸ್ಥಾನಮಾನ ನೀಡಲಾಗಿದೆ.

“ಹಿಂದುಳಿದ ಜಿಲ್ಲೆಯಾಗಿರುವ ರಾಯಚೂರಿನಲ್ಲಿ ಏಮ್ಸ್‌ (AIIMS) ಸ್ಥಾಪಿಸುವ ಮೂಲಕ ಆರೋಗ್ಯ, ಉದ್ಯೋಗ, ವೈದ್ಯಕೀಯ ಶಿಕ್ಷಣದ ಬಲವರ್ಧನೆಗಾಗಿ ಹಾಗೂ ಹಿಂದುಳಿದ ಹಣೆಪಟ್ಟಿ ಕಳಚುವ ಹಿನ್ನಲೆಯಲ್ಲಿ ಏಮ್ಸ್‌ ಮಂಜೂರು ಮಾಡಬೇಕಾಗಿದೆ” ಎಂದು ಭೋಸರಾಜು ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments