Homeಕರ್ನಾಟಕಬಿರಿಯಾನಿ ತಿಂದು ಭಾರತ್ ಜೋಡೋ ಮಾಡಿದವರ ಬಾಯಲ್ಲಿ ದೇಶ ವಿಭಜನೆ ಮಾತು: ಕುಮಾರಸ್ವಾಮಿ ಕಿಡಿ

ಬಿರಿಯಾನಿ ತಿಂದು ಭಾರತ್ ಜೋಡೋ ಮಾಡಿದವರ ಬಾಯಲ್ಲಿ ದೇಶ ವಿಭಜನೆ ಮಾತು: ಕುಮಾರಸ್ವಾಮಿ ಕಿಡಿ

ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಮಾಡಿದ್ದರು. ಈಗ ವಿಭಜನೆಯ ಮಾತನಾಡುತ್ತಿದ್ದಾರೆ ಎಂದು ಸಂಸದ ಡಿ ಕೆ ಸುರೇಶ್‌ ವಿರುದ್ಧ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಬಿಡದಿಯಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಕಲ್ಲು ಒಡೆದುಕೊಂಡಿದ್ದವರನ್ನು ಲೋಕಸಭೆಗೆ ಕಳುಹಿಸಿದರೆ ಇನ್ನೇನಾಗುತ್ತದೆ? ಬಡವರನ್ನು ಲೂಟಿ ಮಾಡಿಕೊಂಡು ಗುಡ್ಡೆ ಹಾಕಿದ್ದಾರೆ. ಅಂಥವರನ್ನು ದೇಶ ಕಟ್ಟು ಅಂತ ಕಳುಹಿಸಿದರೆ ಅವರು ದೇಶ ಕಟ್ಟುತ್ತಾರಾ? ಅವರ ಸಾಮ್ರಾಜ್ಯ ಕಟ್ಟಿಕೊಳ್ಳುತ್ತಾರೆ ಅಷ್ಟೇ” ಎಂದು ಹರಿಹಾಯ್ದರು.

“ಸಂಸದ ಡಿ ಕೆ ಸುರೇಶ್ ಅವರು ದೇಶ ವಿಭಜನೆ ಬಗ್ಗೆ ಮಾತನಾಡಿ, ಅದಕ್ಕೆ ಕೇಂದ್ರ ಸರ್ಕಾರ ಆರ್ಥಿಕ ತಾರತಮ್ಯ ಮಾಡುತ್ತಿದೆ, ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಎಂಬ ಕಾರಣ ಕೊಟ್ಟಿದ್ದಾರೆ. ಇದು ಅಪ್ರಬುದ್ಧ ಹೇಳಿಕೆ” ಎಂದರು.

ಸಂಘರ್ಷದಿಂದ ಹಣ ಪಡೆಯಲು ಸಾಧ್ಯವಿಲ್ಲ

“ಸಂಘರ್ಷದಿಂದ ನಮ್ಮ ಬೇಡಿಕೆಗಳನ್ನು ಕೇಂದ್ರ ಸರ್ಕಾರದಿಂದ ಪಡೆಯಲು ಸಾಧ್ಯವಿಲ್ಲ. ವಾಸ್ತವವನ್ನು ಅವರಿಗೆ ಮನವರಿಕೆ ಮಾಡಬೇಕು. ಕೇಂದ್ರ ಸರ್ಕಾರದ ಮನವೊಲಿಸಿ ಹಣ ಪಡೆಯಬೇಕು. ಅದನ್ನು ಬಿಟ್ಟು ಇವರ ಬಾಲಿಷ ಹೇಳಿಕೆಗಳಿಂದ ಸಮಸ್ಯೆ ಬಗೆಹರಿಯಲ್ಲ” ಎಂದು ಕುಟುಕಿದರು.

ಹಣ ಹಂಚಿಕೆ ಮೋದಿ ಶುರುಮಾಡಿದ್ದಲ್ಲ

“ದೇಶದ ಮೊದಲನೇ ಬಜೆಟ್ 174 ಕೋಟಿ ಇತ್ತು. ಆಗ ದೇಶದಲ್ಲಿ ಆಹಾರದ ಕೊರತೆ ಇತ್ತು. ಆಗಿನಿಂದಲೂ ಸರ್ಕಾರಗಳು ಬಜೆಟ್ ಮಂಡಿಸಿಕೊಂಡು ಬಂದಿವೆ. ನಾವು ಹಣಕಾಸು ಆಯೋಗಗಳನ್ನು ಮಾಡಿಕೊಂಡಿದ್ದೇವೆ. ಅವರು ಎಲ್ಲ ರಾಜ್ಯಕ್ಕೂ ಭೇಟಿಕೊಟ್ಟು ಪರಿಶೀಲನೆ ಮಾಡುತ್ತಾರೆ. ಯಾವ ರಾಜ್ಯಕ್ಕೆ ಎಷ್ಟು ಹಣಬೇಕು ಎಂಬ ವರದಿ ಕೊಡುತ್ತಾರೆ. ಯಾವ ರಾಜ್ಯ ಅಭಿವೃದ್ಧಿ ಆಗಿಲ್ಲ, ಯಾವ ರಾಜ್ಯ ಅಭಿವೃದ್ಧಿ ಆಗಿದೆ ಎಂಬುದನ್ನು ನೋಡಿಕೊಂಡು ಹಣ ಹಂಚುತ್ತಾರೆ. ಈ ಹಂಚಿಕೆ ವ್ಯವಸ್ಥೆಯನ್ನು ಕಾಂಗ್ರೆಸ್ ಇದ್ದಾಗಲೇ ಪ್ರಾರಂಭ ಮಾಡಿತ್ತೇ ವಿನಃ ಪ್ರಧಾನಿ ಮೋದಿ ಬಂದು ಶುರು ಮಾಡಿದ್ದಲ್ಲ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments