Homeಕರ್ನಾಟಕಫೆ.12ರಿಂದ ಅಧಿವೇಶನ, 16ಕ್ಕೆ ಸಿಎಂ ಬಜೆಟ್‌ ಮಂಡನೆ: ಸ್ಪೀಕರ್‌ ಯು ಟಿ ಖಾದರ್‌

ಫೆ.12ರಿಂದ ಅಧಿವೇಶನ, 16ಕ್ಕೆ ಸಿಎಂ ಬಜೆಟ್‌ ಮಂಡನೆ: ಸ್ಪೀಕರ್‌ ಯು ಟಿ ಖಾದರ್‌

ವಿಧಾನ ಮಂಡಲದ ಅಧಿವೇಶನ ಫೆ.12ರಂದು ಆರಂಭಗೊಳ್ಳಲಿದ್ದು, ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್‌ ತಿಳಿಸಿದರು.

ವಿಧಾನಸೌಧದದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ ಅವರು, “ಅಧಿವೇಶನಕ್ಕೂ ಮುನ್ನ ಫೆ.9ರಂದು ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನಲ್ಲಿ ಶಾಸಕರಿಗೆ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಒಂದು ದಿನದ ತರಬೇತಿ ಕಾರ್ಯಾಗಾರ ಆಯೋಜಿಸಲಾಗಿದೆ” ಎಂದರು.

“ಶಾಸಕರಿಗೆ ಬಜೆಟ್‌ ಅಧಿವೇಶನದ ಸ್ವರೂಪ, ಚರ್ಚೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು ಮತ್ತು ಬಜೆಟ್‌ ಅಧಿವೇಶನದ ವರದಿಗಾರಿಕೆ ಬಗ್ಗೆಯೂ ಮಾಧ್ಯಮ ಪ್ರತಿನಿಧಿಗಳಿಗೆ ವಿಶೇಷ ತರಬೇತಿ ನೀಡಲಾಗುವುದು” ಈ ತರಬೇತಿ ಕಾರ್ಯಾಗಾರಕ್ಕೆ ವಿಧಾನ ಪರಿಷತ್‌ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಚಾಲನೆ ನೀಡಲಿದ್ದಾರೆ” ಎಂದು ವಿವರಿಸಿದರು.

ಫೆ.16ಕ್ಕೆ ಸಿಎಂ ಬಜೆಟ್‌ ಮಂಡನೆ

“ಫೆ.16ರಂದು ಸಿಎಂ ಅವರು ಬಜೆಟ್‌ ಮಂಡಿಸಲಿದ್ದು, ಆಯವ್ಯಯದ ಮೇಲೆ ಸಾಮಾನ್ಯ ಚರ್ಚೆ ನಡೆಯಲಿದೆ.
12ರಂದು ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದು, ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ನಡೆದು ತದನಂತರ ನೀರ್ಣಯ ಅಂಗೀಕಾರವಾಗಲಿದೆ. ರಾಜ್ಯಪಾಲರ ಭಾಷಣದ ನಂತರ 16ನೇ ವಿಧಾನಸಭೆಯ 02ನೇ ಅಧಿವೇಶನ ಮುಕ್ತಾಯವಾದ ನಂತರ ಇಲ್ಲಿಯವರೆಗೆ ನಿಧನ ಹೊಂದಿದ ಗಣ್ಯ ವ್ಯಕ್ತಿಗಳ ಕುರಿತು ಸಂತಾಪ ಸೂಚನಾ ನಿರ್ಣಯಗಳನ್ನು ಮಂಡಿಸಲಾಗುವುದು” ಎಂದರು.

“ಈ ಅಧಿವೇಶನದಲ್ಲಿ ಸರಕಾರದಿಂದ ಸ್ವೀಕರಿಸಲಾಗುವ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. 10 ದಿನಗಳ ಕಾಲ ನಡೆಯುವ ಈ ಅಧಿವೇಶನದಲ್ಲಿ 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪಗಳನ್ನ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳ ಕಾರ್ಯಕಲಾಪಗಳನ್ನು ನಡೆಸಲಾಗುವುದು” ಎಂದು ತಿಳಿಸಿದರು.

“ಸದನದಲ್ಲಿ ಉತ್ತರಿಸಲಾಗುವ ಪ್ರಶ್ನೆಗಳು,ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆಗಳು,ಇತ್ಯಾದಿ ಸೂಚನೆಗಳನ್ನು ಸರಕಾರದವರು ನೀಡುವ ಲಿಖಿತ ಉತ್ತರಗಳನ್ನು ಸದನದಲ್ಲಿ ಮಂಡಿಸಿದ ತರುವಾಯ ಮಾನ್ಯ ಸಂಸದರಿಗೆ ಹಾಗೂ ಪತ್ರಕರ್ತರಿಗೆ ಇ-ಮೇಲ್‌ ಮುಖಾಂತರ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಪತ್ರಕರ್ತರಿಗೆ ವಾರ್ತಾ ಇಲಾಖೆಯ ಮುಖಾಂತರ ಇ-ಮೇಲ್‌ ಕಳುಹಿಸಲಾಗುವುದು.ಅಲ್ಲದೇ ಸಚಿವಾಲಯದ ವೆಬ್‌ಸೈಟಿನಲ್ಲಿಯೂ ದೊರೆಯುತ್ತದೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments