ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಅವರಿಗೆ ಸುಖಕರ ಮತ್ತು ಸುರಕ್ಷಿತ ಪ್ರಯಾಣಕ್ಕಾಗಿ ಸಚಿವಾಲಯದಿಂದ ವಿಶೇಷ ಕಾರು ಕಲ್ಪಿಸಲಾಗಿದೆ.
ಇತ್ತೀಚೆಗೆ ರಾಜ್ಯ ಸರ್ಕಾರದ ಎಲ್ಲ ಸಚಿವರಿಗೆ ಐಶಾರಾಮಿ ಕಾರನ್ನು ನೀಡಲಾಗಿತ್ತು. ಇದೀಗ ಸ್ಪೀಕರ್ ಯು ಟಿ ಖಾದರ್ ಅವರಿಗೂ ಸಚಿವಾಲಯದಿಂದ ಐಶಾರಾಮಿ ಫಾರ್ಚೂನರ್ ಕಾರು ಕೊಡಿಸಲಾಗಿದ್ದು, ಇದು ಹಲವು ವಿಶೇಷತೆಗಳನ್ನು ಹೊಂದಿದೆ.
ಈ ಐಶಾರಾಮಿ ಕಾರು, 360 ಡಿಗ್ರಿ ಕ್ಯಾಮೆರಾ ಹಾಗೂ ಪ್ರಯಾಣದ ಸಂದರ್ಭದಲ್ಲಿ ಸ್ಪೀಕರ್ ಖಾದರ್ ಮುಖಕ್ಕೆ ಬೆಳಕು ನೀಡುವ ವಿಶೇಷ ಎಲ್ ಇ ಡಿ ಲೈಟ್ ಸೌಲಭ್ಯ ಹೊಂದಿದೆ.
ಕಾರಿಗೆ ಜಿಆರ್ ಕಿಟ್ ಅಳವಡಿಸುವ ಮೂಲಕ ವಿಶೇಷ ವಿನ್ಯಾಸ ಮಾಡಲಾಗಿದೆ. ಇನ್ನು ಕಾರಿನ ಮುಂಭಾಗ ಹಾಗೂ ಹಿಂಭಾಗದಲ್ಲಿ ಗಂಡಭೇರುಂಡ ಲಾಂಛನ ಹೊಂದಿದೆ. ರಾಜ್ಯಪಾಲರಿಗೆ ಹೊರತಾಗಿ ಸ್ಪೀಕರ್ಗೆ ಮಾತ್ರ ಇದನ್ನು ಹಾಕಲು ಅವಕಾಶ ಇದೆ.
ಕಪ್ಪು ಬಣ್ಣದ ಫಾರ್ಚೂನರ್( ಇ ) ಕಾರಿನ ದರ 33.43 ಲಕ್ಷ ( ಪೆಟ್ರೋಲ್) ಹಾಗೂ ಡೀಸೆಲ್ ಕಾರಿನ ದರ 35.93 ರಿಂದ 51.44 ಲಕ್ಷ ರೂ. ಆಗುತ್ತದೆ. ಆದರೆ, ಈ ಫಾರ್ಚೂನರ್ ಗೆ ವಿಶೇಷ ವಿನ್ಯಾಸ ಮಾಡಿರುವುದರಿಂದ ಒಟ್ಟು 41 ಲಕ್ಷ ರೂ. ವೆಚ್ಚವಾಗಿದೆ ಎಂದು ತಿಳಿದುಬಂದಿದೆ.