Homeಕರ್ನಾಟಕರಾಜ್ಯ ಬಜೆಟ್‌ | ಗ್ರಾಮೀಣ ಭಾಗಕ್ಕೆ ಸಿದ್ದರಾಮಯ್ಯ ಬಂಪರ್ ಭಾಗ್ಯ‌!

ರಾಜ್ಯ ಬಜೆಟ್‌ | ಗ್ರಾಮೀಣ ಭಾಗಕ್ಕೆ ಸಿದ್ದರಾಮಯ್ಯ ಬಂಪರ್ ಭಾಗ್ಯ‌!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಮಂಡಿಸಿದ 15ನೇ ರಾಜ್ಯ ಆಯವ್ಯಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಮೂಲಕ ಗ್ರಾಮೀಣ ಭಾಗಕ್ಕೆ ಭರಪೂರ ಕೊಡಿಗೆ ನೀಡಿದ್ದಾರೆ.

ಪ್ರಸಕ್ತ ಸಾಲಿನಿಂದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸ್ಥರ ಸಹಭಾಗಿತ್ವದೊಂದಿಗೆ ಹಿರಿಯ ನಾಗರಿಕರ ಆರೈಕೆ ಮತ್ತು ಚಿಕಿತ್ಸೆಯನ್ನು ನಿರ್ವಹಿಸಲು ಆರೈಕೆ–ಉಪಶಮನ (Palliative Care) ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಸಿದ್ದರಾಮ್ಯ ತಿಳಿಸಿದ್ದಾರೆ.

“ರಾಜ್ಯದ 100 ಆಯ್ದ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗೆ ಅನುಗುಣವಾಗಿ ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಲು ಸಾವಿತ್ರಿಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆಯನ್ನು ಪ್ರಾರಂಭಿಸಲಾಗುವುದು. ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ತಲಾ ಒಂದು ಲಕ್ಷ ರೂ. ನೆರವಿನೊಂದಿಗೆ ಎಸ್.ಹೆಚ್.ಜಿ.ಗಳ ಸಹಯೋಗದೊಂದಿಗೆ ಎಣ್ಣೆ ಗಾಣವನ್ನು ಸ್ಥಾಪಿಸಲಾಗುವುದು” ಎಂದು ಸಿಎಂ ಹೇಳಿದ್ದಾರೆ.

“ಕಲ್ಯಾಣ ಕರ್ನಾಟಕ ಭಾಗದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸರ್ಕಾರದ ಮಾನ್ಯತೆಯುಳ್ಳ ದಾಖಲೆಗಳನ್ನು ಡಿಜಿಲಾಕರ್‌ ಆಪ್‌ನಲ್ಲಿ ಸುರಕ್ಷಿತವಾಗಿರಿಸುವ ಸಲುವಾಗಿ ನನ್ನ ಗುರುತು ಅಭಿಯಾನವನ್ನು ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ 1,000 ಗ್ರಾಮ ಪಂಚಾಯಿತಿಗಳಲ್ಲಿ ಹಮ್ಮಿಕೊಳ್ಳಲಾಗುವುದು” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

  • ಗ್ರಾಮೀಣ ಭಾಗದ ರಸ್ತೆ ಸಂಪರ್ಕ ಜಾಲವನ್ನು ವ್ಯವಸ್ಥಿತವಾಗಿ ಮತ್ತು ಗುಣಾತ್ಮಕವಾಗಿ ಅಭಿವೃದ್ಧಿಪಡಿಸಲು ‘ಪ್ರಗತಿ ಪಥ ಯೋಜನೆ’ಯನ್ನು ಬಾಹ್ಯ ನೆರವಿನೊಂದಿಗೆ ಪ್ರಾರಂಭ. ಈ ಈ ಯೋಜನೆ ಅಡಿಯಲ್ಲಿ 189 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ತಲಾ 50 ಕಿ.ಮೀ. ಉದ್ದದ ರಸ್ತೆಗಳಂತೆ, ಒಟ್ಟಾರೆಯಾಗಿ 9,450 ಕಿ.ಮೀ. ಉದ್ದದ ರಸ್ತೆ ಸಂಪರ್ಕ ಜಾಲವನ್ನು 5,200 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಯ ಭರವಸೆ.
  • ಕಲ್ಯಾಣ ಪಥ ಯೋಜನೆಯಡಿ ಕಲ್ಯಾಣ ಕರ್ನಾಟಕದ 38 ಗ್ರಾಮೀಣ ವಿಧಾನ ಸಭಾ ಕ್ಷೇತ್ರಗಳಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆ ಮಾದರಿಯಲ್ಲಿ ಒಟ್ಟು 1,150 ಕಿ.ಮೀ. ರಸ್ತೆಗಳನ್ನು 1,000 ಕೋಟಿ ರೂ.ಗಳ ವೆಚ್ಚದಲ್ಲಿ ಅಭಿವೃದ್ಧಿಯ ಗುರಿ.
  • ಜೀತ ಕಾರ್ಮಿಕ ಪದ್ಧತಿಯಿಂದ ಬಿಡುಗಡೆಗೊಂಡ ಕಾರ್ಮಿಕರ ಪುನರ್ವಸತಿಗಾಗಿ ನೀಡುವ ಮಾಸಿಕ ಪ್ರೋತ್ಸಾಹಧನವನ್ನು 2,000 ರೂ.ಗಳಿಗೆ ಹೆಚ್ಚಳ.
  • ಕರ್ನಾಟಕದಲ್ಲಿ ಗ್ರಾಮ ಪಂಚಾಯತಿಗಳು ಆರೋಗ್ಯ ರಕ್ಷಣೆ, ಘನತ್ಯಾಜ್ಯ ನಿರ್ವಹಣೆ, ಗ್ರಂಥಾಲಯ ನವೀಕರಣ ಮುಂತಾದ ಕ್ಷೇತ್ರಗಳಲ್ಲಿ ನಾಯಕತ್ವದ ಸಾಮರ್ಥ್ಯವನ್ನು ಪ್ರದರ್ಶಿಸಿವೆ. ಈ ದಿಸೆಯಲ್ಲಿ ಗ್ರಾಮ ಪಂಚಾಯಿತಿಗಳನ್ನು ಸಾಮಾಜಿಕ ಕಳಕಳಿಯುಳ್ಳ ಸ್ಪಂದನಾಶೀಲ ಹಾಗೂ ಸಮರ್ಥ ಗ್ರಾಮ ಸರ್ಕಾರಗಳನ್ನಾಗಿ ರೂಪಿಸಲು ಕ್ರಮ.
  • 2024-25ನೇ ಸಾಲಿನಲ್ಲಿ 16 ಕೋಟಿ ಮಾನವ-ದಿನಗಳನ್ನು ಸೃಜಿಸಿ, ಸುಮಾರು 30 ಲಕ್ಷ ಕುಟುಂಬಗಳಿಗೆ ಉದ್ಯೋಗ ನೀಡುವ ಗುರಿ ಹೊಂದಲಾಗಿದೆ. ಪ್ರಮುಖವಾಗಿ ಜಲಾನಯನ ಇಲಾಖೆಯ ಒಗ್ಗೂಡಿಸುವಿಕೆಯೊಂದಿಗೆ 5,000 ಎಕರೆ ಸವಳು-ಜವಳು ಭೂಮಿಯನ್ನು ಸುಧಾರಿಸುವ ಮತ್ತು ಪ್ರತಿ ತಾಲ್ಲೂಕಿಗೆ ಕನಿಷ್ಠ 2ರಂತೆ ಬೂದು ನೀರು ಸಂಸ್ಕರಣಾ ಘಟಕಗಳನ್ನು ನಿರ್ಮಾಣ ಮಾಡುವ ಗುರಿ.
  • ಅರಿವು ಕೇಂದ್ರಗಳನ್ನು ಬಲಪಡಿಸುವ ದೃಷ್ಠಿಯಿಂದ 132 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ. ಪುಸ್ತಕಗಳು, ಡಿಜಿಟಲ್‌ ಉಪಕರಣಗಳು ಹಾಗೂ ವಿಕಲಚೇತನ ಸ್ನೇಹಿ ಉಪಕರಣಗಳನ್ನು ಖರೀದಿಗೆ ಕ್ರಮ.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments