Homeಕರ್ನಾಟಕತಾವು ಕಲಿತ ಸರ್ಕಾರಿ ಶಾಲೆಗೆ 10 ಲಕ್ಷ ರೂ. ದೇಣಿಗೆ ನೀಡಿದ ಸಿಎಂ ಸಿದ್ದರಾಮಯ್ಯ

ತಾವು ಕಲಿತ ಸರ್ಕಾರಿ ಶಾಲೆಗೆ 10 ಲಕ್ಷ ರೂ. ದೇಣಿಗೆ ನೀಡಿದ ಸಿಎಂ ಸಿದ್ದರಾಮಯ್ಯ

“ನಾನು ಹುಟ್ಟಿದ್ದು ಸ್ವಾತಂತ್ರ್ಯ ಪೂರ್ವದಲ್ಲಿ. ನಂಜೇಗೌಡ ಎಂಬುವರು ನನಗೆ ಅಕ್ಷರಾಭ್ಯಾಸ ಹೇಳಿಕೊಟ್ಟರು. ಎಮ್ಮೆ ಮೇಯಿಸುತ್ತಿದ್ದ ನನ್ನನ್ನು ರಾಜಪ್ಪ ಮೇಷ್ಟ್ರು ಶಾಲೆಗೆ ಹಾಕಿದ್ದರಿಂದ ಶಿಕ್ಷಣ ಕಡೆ ಮುಖ ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಸ್ಮರಿಸಿದರು.

ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ – ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಚಾಲನೆ ನೀಡಿ ಮಾತನಾಡಿದರು.

“ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಸಂವಿಧಾನದ ತಿರುಳು. ಸಮಾನತೆ ಸಮಸಮಾಜ ನಿರ್ಮಾಣ ವಾಗಬೇಕು. ಬುದ್ಧ, ಬಸವ, ಅಂಬೇಡ್ಕರ್ ಅವರು ಇದನ್ನೇ ಹೇಳಿಕೊಂಡು ಬಂದಿದ್ದಾರೂ ಇದು ಪೂರ್ಣವಾಗಿ ಹೋಗಿಲ್ಲ” ಎಂದರು.

“ಸರ್ಕಾರಿ ಶಾಲೆಗಳಲ್ಲಿ ಕೆಲವು ವಿನೂತನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶಾಲೆಯ ಅಭಿವೃದ್ಧಿಗೆ ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ಸಂವಿಧಾನ ಜಾರಿಗೆ ಬಂದ ನಂತರ ಉಚಿತ ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಿದೆ. ಹಾಗಾಗಿ ಎಲ್ಲರಿಗೂ ಶಿಕ್ಷಣ ಕಡ್ಡಾಯವಾಗಿದೆ” ಎಂದು ಹೇಳಿದರು.

ಸಂವಿಧಾನ ಏನು ಹೇಳುತ್ತದೆ ಹೇಳಿ ನೋಡೋಣ ಮಕ್ಕಳನ್ನು ಸಿದ್ದರಾಮಯ್ಯ ಕೇಳಿದಾಗ, ಮಕ್ಕಳು ಸಂವಿಧಾನದ ಪೂರ್ಣ ಪೀಠಿಕೆಯನ್ನು ಹೇಳಿದರು. “ಕೇವಲ ಕಂಠಪಾಠ ಮಾಡಿದರೆ ಸಾಲದು, ಅದರ ತಿರುಳನ್ನು ಅರಿತು ಅದರಂತೆ ನಡೆಯಬೇಕು” ಎಂದರು. ಇದೇ ವೇಳೆ ಸಿದ್ದರಾಮನಹುಂಡಿ ಹಾಗೂ ಕುಪ್ಪೆಗಾಲ ಸರ್ಕಾರಿ ಶಾಲೆಯ ಮಕ್ಕಳೊಡನೆ ಮುಖ್ಯಮಂತ್ರಿಗಳು ಸಂವಾದ ನಡೆಸಿದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಓದಿದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ , ಕುಪ್ಪೇಗಾಲ ಮತ್ತು ಕೆ.ಪಿ.ಎಸ್. ಸಿದ್ದರಾಮನಹುಂಡಿ ಶಾಲೆಗೆ 10 ಲಕ್ಷ ರೂ. ಗಳ ದೇಣಿಗೆ ನೀಡಿದರು.

ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾತನಾಡಿ, ” 6 ಕೋಟಿ ರೂ.ಗಳನ್ನು ಹಳೆಯ ಶಾಲೆಯ ವಿದ್ಯಾರ್ಥಿಗಳು ನೀಡಿದ್ದಾರೆ. ಮಾಲೂರಿನಲ್ಲಿಯೂ ಕೂಡ ಆರು ಕೋಟಿ ರೂ.ಗಳು ಹಳೆಯ ವಿದ್ಯಾರ್ಥಿಗಳು ಸಂಗ್ರಹಿಸಿದ್ದಾರೆ. ಸಾಮಾಜಿಕ ಕಳಕಳಿಯುಳ್ಳವರು ಮಕ್ಕಳಿಗೆ ಪಾಠವನ್ನೂ ಮಾಡಿದ್ದಾರೆ” ಎಂದರು.

“48,000 ಸರ್ಕಾರಿ ಶಾಲೆಗಳಲ್ಲಿ 14 000 ವಾಟ್ಸಾಪ್ ಗುಂಪುಗಳಾಗಿವೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ ಕುರಿತು ದೊಡ್ಡ ಗುರಿಯನ್ನು ಹೊಂದಿದ್ದೇವೆ. 44 ಸಾವಿರ ಕೋಟಿ ರೂ.ಗಳನ್ನು ಸರ್ಕಾರಿ ಶಾಲೆ ಗಳ ಅಭಿವೃದ್ಧಿಗೆ ಮೀಸಲಿರಿಸಲಾಗಿದೆ. ಸಿ.ಎಸ್.ಆರ್. ನಿಂದಲೂ ಇತರೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ” ಎಂದು ವಿವರಿಸಿದರು.

ಕೈಗಾರಿಕಾ ಸಚಿವ ಎಂ ಬಿ ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಉನ್ನತ ಶಿಕ್ಷಣ ಸಚಿವ ಸುಧಾಕರ್, ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಸೇರಿದಂತೆ ಇತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments