Homeಕರ್ನಾಟಕ‌ಲೋಕಸಭಾ ಚುನಾವಣೆ-2024 | ಕೆಲವು ಹಾಲಿ ಸಂಸದರಿಗೆ ಟಿಕೆಟ್ ಇಲ್ಲ, ಹೊಸ‌ ಮುಖಗಳಿಗೆ ಮಣೆ: ಆರ್‌...

‌ಲೋಕಸಭಾ ಚುನಾವಣೆ-2024 | ಕೆಲವು ಹಾಲಿ ಸಂಸದರಿಗೆ ಟಿಕೆಟ್ ಇಲ್ಲ, ಹೊಸ‌ ಮುಖಗಳಿಗೆ ಮಣೆ: ಆರ್‌ ಅಶೋಕ್

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೊಸ‌ ಮುಖಗಳಿಗೆ ಹೆಚ್ಚು ಟಿಕೆಟ್ ಸಿಗಬಹುದು. ಇನ್ನೊಂದು ಸುತ್ತಿನ ಮಾತುಕತೆ ಆದ ಕೂಡಲೇ ಪಟ್ಟಿ ಬಿಡುಗಡೆ ಮಾಡುತ್ತಾರೆ. ಯಾವ ಕ್ಷೇತ್ರದಲ್ಲಿ ಸಮಸ್ಯೆ ಇದೆಯೋ ಅಲ್ಲಿ ಮತ್ತೊಮ್ಮೆ ಚರ್ಚೆ ಮಾಡಿ ತೀರ್ಮಾನ ಕೈಗೊಳ್ಳುತ್ತಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಈ ಬಾರಿ ಕೆಲವು ಹಾಲಿ ಸಂಸದರಿಗೆ ವಯಸ್ಸು ಹಾಗೂ ಅನಾರೋಗ್ಯ ಕಾರಣದಿಂದಾಗಿ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ” ಎಂದರು.

“ವರಿಷ್ಠರು ಅಭ್ಯರ್ಥಿಗಳ ಮಾಹಿತಿ, ಹಿನ್ನೆಲೆ ತೆಗೆದುಕೊಂಡಿದ್ದಾರೆ. ಕೆಲವರನ್ನು ವಯಸ್ಸು, ಆರೋಗ್ಯ ಕಾರಣದಿಂದ ಬದಲಾವಣೆ ಮಾಡಲಾಗುತ್ತದೆ. ಬಹುತೇಕ ಚರ್ಚೆ ಒಂದು ಹಂತಕ್ಕೆ ಬಂದಿದೆ. ಗೊಂದಲ ಇರುವ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಬೇಕಿದೆ” ಎಂದು ಹೇಳಿದರು.

“ಎರಡು ದಿನಗಳ ಕಾಲ ದೆಹಲಿಯಲ್ಲಿ ಸಭೆ ನಡೆಸಲಾಗಿದೆ. ಒಂದು ಸುತ್ತಿನ ಮಾತುಕತೆ ನಡೆದಿದೆ. ಸಭೆಯಲ್ಲಿ ರಾಜ್ಯ ಕೋರ್ ಕಮಿಟಿ ಕಳಿಸಿದ್ದ ಪಟ್ಟಿ ಬಗ್ಗೆ ಚರ್ಚೆ ಆಗಿದೆ. ಸವಿಸ್ತಾರವಾಗಿ ಅಮಿತ್ ಶಾ, ನಡ್ಡಾ, ಸಂತೋಷ್ ಅವರ ಜೊತೆ ಚರ್ಚೆ ಆಗಿದೆ” ಎಂದು ತಿಳಿಸಿದರು.

ಸುಮಲತಾ ಅಂಬರೀಶ್ ಇನ್ನೂ ನಮ್ಮ ಪಕ್ಷ ಸೇರಿಲ್ಲ

ಮಂಡ್ಯದಲ್ಲಿ ಬಿಜೆಪಿಯಿಂದ ನಾನೇ ಸ್ಪರ್ಧೆ ಎಂದು ಸಂಸದೆ ಸುಮಲತಾ ಹೇಳಿದ್ದಾರಲ್ಲಾ ಎಂದು ಪ್ರಶ್ನಿಸಿದಾಗ, “ಸುಮಲತಾ ಅಂಬರೀಶ್ ನಮಗೆ ಬರೀ ಬೆಂಬಲ ಅಷ್ಟೇ ಕೊಟ್ಟಿದ್ದಾರೆ. ಆದರೆ ಅವರು ಇನ್ನೂ ಪಕ್ಷಕ್ಕೆ ಸೇರಿಲ್ಲ. ಹೀಗಾಗಿ ಅವರ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ” ಎಂದರು.

ಮೈಸೂರು, ಮಂಡ್ಯ, ಗುಲ್ಬರ್ಗ, ಹಾಸನ ಎಲ್ಲಾ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಿದೆ. ಹಾಲಿ ಉತ್ತಮ ಸಂಸದರಿಗೆ ಮತ್ತೊಮ್ಮೆ ಅವಕಾಶ ಕೊಡುವ ಬಗ್ಗೆ ಚರ್ಚೆ ಆಗಿದೆ. ಬೆಂಗಳೂರು ಉತ್ತರಕ್ಕೆ ನಮ್ಮ ಅಭಿಪ್ರಾಯವನ್ನು ನಾವು ತಿಳಿಸಿದ್ದೇವೆ. ಮುಂದಿನ ತೀರ್ಮಾನವನ್ನು ನಮ್ಮ ವರಿಷ್ಠರು ಮಾಡುತ್ತಾರೆ. ಜೆಡಿಎಸ್ ನಾಯಕರು ಇನ್ನು ಎರಡು-ಮೂರು ದಿನಗಳಲ್ಲಿ ದೆಹಲಿಗೆ ಹೋಗುತ್ತಾರೆ. ಅವರು ಯಾವ ಕ್ಷೇತ್ರದಲ್ಲಿ ಸೀಟು ಕೇಳುತ್ತಾರೋ ಅದನ್ನು ಬಿಟ್ಟು ಕೊಡುವ ಬಗ್ಗೆ ವರಿಷ್ಠರು ಮಾತಾಡುತ್ತಾರೆ” ಎಂದು ವಿವರಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments