Homeಕರ್ನಾಟಕಬಿಜೆಪಿಯಿಂದ ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ; ಶುಭಾಶಯ ತಿಳಿಸಿದ ಮೋದಿ

ಬಿಜೆಪಿಯಿಂದ ರಾಜ್ಯಸಭೆಗೆ ಸುಧಾಮೂರ್ತಿ ನಾಮನಿರ್ದೇಶನ; ಶುಭಾಶಯ ತಿಳಿಸಿದ ಮೋದಿ

ಇನ್ಫೋಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಪತ್ನಿ ಹಾಗೂ ಇನ್ಫೋಸಿಸ್‌ ಫೌಂಡೇಷನ್‌ನ ಅಧ್ಯಕ್ಷೆ ಸುಧಾಮೂರ್ತಿ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಬಿಜೆಪಿ ಪಕ್ಷದಿಂದ ಅವರನ್ನು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಲಾಗಿದ್ದು, ಈ ಕುರಿತು ತಾಗಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್‌ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.

“ಭಾರತದ ರಾಷ್ಟ್ರಪತಿಗಳು ಸುಧಾಮೂರ್ತಿ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿರುವುದು ನನಗೆ ಖುಷಿ ತಂದಿದೆ. ಸಮಾಜಸೇವೆ, ಲೋಕೋಪಕಾರ ಮತ್ತು ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಸುಧಾ ಜಿಯವರ ಕೊಡುಗೆ ಅಪಾರ ಮತ್ತು ಸ್ಪೂರ್ತಿದಾಯಕವಾಗಿದೆ” ಎಂದು ಮೋದಿ ಬಣ್ಣಿಸಿದ್ದಾರೆ.

“ರಾಜ್ಯಸಭೆಯಲ್ಲಿ ಅವರ ಉಪಸ್ಥಿತಿಯು ನಮ್ಮ ‘ನಾರಿ ಶಕ್ತಿ’ಗೆ ಪ್ರಬಲವಾದ ಸಾಕ್ಷಿಯಾಗಿದೆ, ಇದು ನಮ್ಮ ರಾಷ್ಟ್ರದ ಭವಿಷ್ಯವನ್ನು ರೂಪಿಸುವಲ್ಲಿ ಮಹಿಳೆಯರ ಶಕ್ತಿ ಮತ್ತು ಸಾಮರ್ಥ್ಯವನ್ನು ಉದಾಹರಿಸುತ್ತದೆ. ಅವರ ಸಂಸದೀಯ ಅವಧಿ ಫಲಪ್ರದವಾಗಲಿ ಎಂದು ಹಾರೈಸುತ್ತೇನೆ” ಎಂದು ಮೋದಿ ಬರೆದುಕೊಂಡಿದ್ದಾರೆ.

ಸುಧಾಮೂರ್ತಿ ಹಿನ್ನೆಲೆ

ವಿಶ್ವದ ಪ್ರಮುಖ ಐಟಿ ಕಂಪನಿಗಳಲ್ಲಿ ಒಂದಾಗಿರುವ ಇನೋಸಿಸ್ ಸಂಸ್ಥಾಪಕ ನಾರಾಯಣಮೂರ್ತಿ ಅವರ ಪತ್ನಿಯಾಗಿರುವ ಸುಧಾಮೂರ್ತಿ ಅವರು ಸಾಹಿತ್ಯ, ಬರಹ, ಸಮಾಜಸೇವೆ, ಶಿಕ್ಷಣ ಮಹಿಳೆಯರ ಸಬಲೀಕರಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕಳೆದ ಹಲವಾರು ವರ್ಷಗಳಿಂದ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ಅವರ ಸರಳ ಜೀವನ, ಸಜ್ಜನಿಕೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಕಾರಣವಾಗಿತ್ತು. ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಸುಧಾಮೂರ್ತಿ ಅವರ ಪುತ್ರಿ ಅಕ್ಷತಾ ಮೂರ್ತಿ ವಿವಾಹವಾಗಿದ್ದಾರೆ.

ಸುಧಾ ಮೂರ್ತಿಯವರು ಆಗಸ್ಟ್ 19, 1950ರಂದು ಹಾವೇರಿಯ ಜಿಲ್ಲೆಯ ಶಿಗ್ಗಾಂವಿಯಲ್ಲಿ ಡಾ.ಆರ್.ಹೆಚ್.ಕುಲಕರ್ಣಿ ಮತ್ತು ವಿಮಲಾ ಕುಲಕರ್ಣಿ ದಂಪತಿಗೆ ಪುತ್ರಿಯಾಗಿ ಜನಿಸಿದರು. ಹುಬ್ಬಳ್ಳಿಯಲ್ಲಿರುವ ಕೆಎಲ್‍ಇ ಸಂಸ್ಥೆಯ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪದವಿ, ನಂತರ ಐಐಟಿಯಲ್ಲಿ ಕಂಪ್ಯೂಟರ್ ಸೈನ್ಸ್‍ನಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.

1970 ಫೆಬ್ರವರಿ 10ರಂದು ನಾರಾಯಣ ಮೂರ್ತಿ ಅವರನ್ನು ವಿವಾಹವಾದರು. ನಂತರ ಇವರು ಇನ್ಪೋಸಿಸ್ ಕಂಪನಿಯನ್ನು ಸ್ಥಾಪಿಸಿದರು. ಈ ಕಂಪನಿ ಜಗತ್ತಿನಾದ್ಯಂತ ಹೆಸರುವಾಸಿ ಆಯ್ತು. ಇವರ ಕಂಪನಿ ಬೆಳೆಯುತ್ತಾ ಹೋದಂತೆ, ಹೆಚ್ಚು ಆದಾಯ ಬರಲು ಆರಂಭಿಸಿತು. ಹೀಗೆ ಬಂದ ಆದಾಯದಲ್ಲಿ ಒಂದಿಷ್ಟು ಪ್ರತಿಷತದಷ್ಟು ಸಮಾಜ ಸೇವೆಗೆ ಮುಡಿಪಾಗಿಡಲು ಆರಂಭಿಸಿದರು.

1996ರಲ್ಲಿ ಸಾರ್ವಜನಿಕ ಚಾರಿಟೇಬಲ್ ಟ್ರಸ್ಟ್ ಸ್ಥಾಪಿಸಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಇದುವರೆಗೆ 2,300 ಮನೆಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಶಾಲೆಗಳಲ್ಲಿ 70,000 ಗ್ರಂಥಾಲಯಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಇವರ ಸಂಸ್ಥೆ ಇದುವರೆಗೆ 16,000 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಿದೆ. ಇವರಿಗೆ 2006ರಲ್ಲಿ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ಸುಧಾಮೂರ್ತಿಯವರು ಇದುವರೆಗೆ ಕನ್ನಡ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ಸಾಕಷ್ಟು ಪುಸ್ತಕಗಳನ್ನು ಬರೆದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments