Homeಕರ್ನಾಟಕಜೆಡಿಎಸ್ ‌ಅಸ್ತಿತ್ವದಲ್ಲಿಲ್ಲ, ಹೀಗಾಗಿ ಅಳಿಯನ್ನು ಬಿಜೆಪಿ ಅಭ್ಯರ್ಥಿ ಮಾಡಿದ್ದಾರೆ: ಡಿ ಕೆ ಶಿವಕುಮಾರ್

ಜೆಡಿಎಸ್ ‌ಅಸ್ತಿತ್ವದಲ್ಲಿಲ್ಲ, ಹೀಗಾಗಿ ಅಳಿಯನ್ನು ಬಿಜೆಪಿ ಅಭ್ಯರ್ಥಿ ಮಾಡಿದ್ದಾರೆ: ಡಿ ಕೆ ಶಿವಕುಮಾರ್

ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿ ಮಾಡುತ್ತಿದ್ದರು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು.

ಬೆಂಗಳೂರಿನ ಕುಮಾರಪಾರ್ಕ್‌ನಲ್ಲಿನ ತಮ್ಮ ಸರ್ಕಾರಿ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು,”ಯಾರಾದರೂ ತಮ್ಮದೇ ಪಕ್ಷ ಇಟ್ಟುಕೊಂಡು ತಮ್ಮ ಕುಟುಂಬದವರನ್ನು ಬೇರೆ ಪಕ್ಷದಿಂದ ಕಣಕ್ಕಿಳಿಸುತ್ತಾರಾ? ಆ ಪಕ್ಷ ಇರಬೇಕು, ಪ್ರಬಲ ವಿರೋಧ ಪಕ್ಷವಾಗಬೇಕು ಎಂಬುದು ನಮ್ಮ ಆಸೆ. ಆದರೆ ಅವರೇ ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡಿಕೊಳ್ಳುತ್ತಿದ್ದಾರೆ” ಎಂದರು.

“ದೇಶದ ಪ್ರಧಾನಿಯಾದವರು, ಎರಡು ಬಾರಿ ಮುಖ್ಯಮಂತ್ರಿಯಾದವರು ಇರುವ ಪಕ್ಷವನ್ನು ವಿಲೀನ ಮಾಡುತ್ತಿರುವುದನ್ನು ನೋಡಿ ಬೇಸರವಾಗುತ್ತಿದೆ” ಎಂದು ಹೇಳಿದರು.

ಐಟಿ ಇಲಾಖೆ ನೋಟೀಸ್ ಬಗ್ಗೆ ದೇವೇಗೌಡರ ಆರೋಪದ ಬಗ್ಗೆ ಕೇಳಿದಾಗ, “1823 ಕೋಟಿ ಕಟ್ಟಬೇಕು ಎಂದು ದೇಶದ ಐಟಿ ಇಲಾಖೆ ಎಐಸಿಸಿಗೆ ನೋಟೀಸ್ ನೀಡಿದೆ. ವಿರೋಧ ಪಕ್ಷಗಳ ಮೇಲೆ ಈ ರೀತಿ ದಾಳಿ ಮಾಡಲಾಗುತ್ತಿದೆ. ದೇವೇಗೌಡರು ಐಟಿ ಅಧಿಕಾರಿಯೇ? ಅವರು ಆರೋಪ ಮಾಡಬೇಕು, ಅದಕ್ಕಾಗಿ ಮಾಡಿದ್ದಾರೆ. ನಾವು ಕೂಡ ಅವರ ಮೇಲೆ ಆರೋಪ ಮಾಡಬಹುದು. ಅವರ ಆರೋಪ ನಿರಾಧಾರ. ನಾವು ಯಾರಿಗೂ ದುಡ್ಡು ಕಟ್ಟುವ ಅಗತ್ಯವಿಲ್ಲ. ನಮ್ಮ ಖಾತೆಗಳನ್ನು ಮುಟ್ಟುಗೋಲು ಹಾಕಿಕೊಂಡು ಅದರಲ್ಲಿದ್ದ ಹಣವನ್ನು ಕದ್ದಿದ್ದಾರೆ” ಎಂದು ಆರೋಪಿಸಿದರು.

“ನಮ್ಮ ಪಕ್ಷ 20ಕ್ಕೂ ಹೆಚ್ಚು ಕ್ಷೇತ್ರ ಗೆಲ್ಲಲಿದೆ ಎಂಬುದು ಅವರಿಗೆ ಅರಿವಾಗಿದೆ. ಹೀಗಾಗಿ ಅಸೂಯೆಯಿಂದ ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ”ಎಂದು ತಿರುಗೇಟು ನೀಡಿದರು.

ಡಿ.ಕೆ ಸುರೇಶ್ ಪಕ್ಷದ ಬಾವುಟ ಬಿಟ್ಟು ಕನ್ನಡ ಬಾವುಟ ಇಟ್ಟುಕೊಂಡಿದ್ದಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಮಗೆ ರಾಷ್ಟ್ರಧ್ವಜ, ಪಕ್ಷದ ಧ್ವಜ, ನಾಡ ಧ್ವಜದ ಮೇಲೆ ಗೌರವವಿದೆ. ನಮ್ಮ ನಾಡು, ಭೂಮಿ, ನಮಗೆ ಆಗುತ್ತಿರುವ ಅನ್ಯಾಯವನ್ನು ವಿರೋಧಿಸಿ ರಾಜ್ಯದ ಹಿತ ಕಾಯಲು ನಾವು ಕನ್ನಡಿಗರಿಗೆ ಕರೆ ನೀಡುತ್ತಿದ್ದೇವೆ” ಎಂದು ತಿಳಿಸಿದರು.

ಬಿಜೆಪಿ ಅಸಮಾಧಾನಿತ ನಾಯಕ ಕರಡಿ ಸಂಗಣ್ಣ ಅವರು ನಿಮ್ಮನ್ನು ಹಾಗೂ ಮುಖ್ಯಮಂತ್ರಿಗಳನ್ನು ಸಂಪರ್ಕ ಮಾಡಿದ್ದಾರೆಯೇ ಎಂದು ಕೇಳಿದಾಗ, “ನಮ್ಮನ್ನು ಅನೇಕ ನಾಯಕರು ಸಂಪರ್ಕ ಮಾಡಿದ್ದಾರೆ. ಅವರ ಹೆಸರುಗಳನ್ನು ಬಹಿರಂಗಪಡಿಸುವುದಿಲ್ಲ. ನಮ್ಮ ಪಕ್ಷಕ್ಕೆ ಸೇರಲು ಬಯಸಿ ಬಿಜೆಪಿ ಹಾಗೂ ಜೆಡಿಎಸ್ ನ ಪ್ರಮುಖ ನಾಯಕರು ಮುಂದಾಗಿದ್ದಾರೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments