ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸಾತ್ವಿಕ್ನನ್ನು ಕೊನೆಗೂ ರಕ್ಷಿಸಲಾಗಿದೆ.
ಸತತ 18 ಗಂಟೆಗಳಿಗೂ ಹೆಚ್ಚು ಕಾಲ ನಡೆದ ಕಾರ್ಯಾಚರಣೆಯ ಬಳಿಕ ಮಗುವನ್ನು ರಕ್ಷಣೆ ಮಾಡಲಾಗಿದೆ. ಸಾತ್ವಿಕ್ನನ್ನು ತಕ್ಷಣವೇ ಆಂಬುಲೆನ್ಸ್ನಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮಗುವಿನ ಪೋಷಕರಾದ ಸತೀಶ್ ಮತ್ತು ಪೂಜಾ ದಂಪತಿ ಹಾಗೂ ಸ್ಥಳೀಯರು ಕೊನೆಗೂ ನಿಟ್ಟುಸಿರು ಬಿಟ್ಟಿದ್ದಾರೆ.
ಸಾತ್ವಿಕ್ನನ್ನು ಜೀವಂತವಾಗಿ ಹೊರ ತೆಗೆಯುವಲ್ಲಿ ರಕ್ಷಣಾ ಸಿಬ್ಬಂದಿ ಕೊನೆಗೂ ಯಶಸ್ವಿಯಾಗಿದ್ದಾರೆ. ನಿರಂತರ ಕಾರ್ಯಾಚರಣೆ ನಡೆಸಿ ಮಗು ಸಾತ್ವಿಕ್ನನ್ನು ರಕ್ಷಿಸಿದ ಸಿಬ್ಬಂದಿ ಬಗ್ಗೆ ಮೆಚ್ಚುಗೆಯ ಮಹಾಪೂರವೇ ವ್ಯಕ್ತವಾಗುತ್ತಿದೆ.
ಎನ್ಡಿಆರ್ಎಫ್ ತಂಡ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಇವರಿಗೆ ಬೆಳಗಾವಿಯಿಂದ ಬಂದಿದ್ದ ಶ್ರೀಶೈಲ್ ಚೌಗಲಾ ನೇತೃತ್ವದ ರಾಜ್ಯ ವಿಪತ್ತು ನಿರ್ವಹಣಾ ತಂಡ (ಎಸ್ಡಿಆರ್ಎಫ್), ಸ್ಥಳೀಯ ಪೊಲೀಸರು, ಅಗ್ನಿ ಶಾಮಕ ದಳ ಸಿಬ್ಬಂದಿ ಸಾಥ್ ನೀಡಿದರು.